ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಂದರ ತ್ವಚೆ, ಆರೋಗ್ಯಕ್ಕೆ ತುಳಸಿ

Last Updated 3 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ದೈವಿಕ ಸ್ಥಾನ ಗಳಿಸಿರುವ ತುಳಸಿ ಗಿಡ ಪೂಜನೀಯ ಮಾತ್ರವಲ್ಲ, ಆರೋಗ್ಯ ಮತ್ತು ಸೌಂದರ್ಯವರ್ಧಕವೂ ಹೌದು. ತುಳಸಿಯಲ್ಲಿರುವ ಔಷಧೀಯ ಗುಣಗಳಿಂದಾಗಿ ಅದು ಆರೋಗ್ಯದ ಸಮಸ್ಯೆಗೆ ಪರಿಹಾರ ನೀಡುವ ಜತೆಗೆ ತ್ಚಚೆಯ ಸೌಂದರ್ಯವನ್ನೂ ಕಾಪಾಡುವ ಶಕ್ತಿಯನ್ನು ಹೊಂದಿದೆ. ಮನೆಯಂಗಳದಲ್ಲಿ ಸುಲಭವಾಗಿ ದೊರೆಯುವ ತುಳಸಿ ಗಿಡದಿಂದ ಆಗುವ ಪ್ರಯೋಜಗಳ ಕುರಿತು ಇಲ್ಲಿದೆ ಮಾಹಿತಿ.

* ಒಂದೆರಡು ಹನಿ ತುಳಸಿ ರಸವನ್ನು ಕಿವಿಯೊಳಗೆ ಬಿಟ್ಟರೆ ಕಿವಿನೋವು ಕಡಿಮೆಯಾಗುತ್ತದೆ.

* ತುಳಸಿ ಬೇರಿನಿಂದ ಕಷಾಯ ಮಾಡಿ ಕುಡಿದರೆ ಜ್ವರ ಕಡಿಮೆಯಾಗುತ್ತದೆ.

* ಗ೦ಟಲುನೋವು, ಅಲರ್ಜಿ, ಹಿಮೋಗ್ಲೋಬಿನ್ ಹೆಚ್ಚಳಕ್ಕೆ ತುಳಸಿ ತಿಂದರೆ ಅನುಕೂಲ

* ಒಂದು ಚಮಚೆಯಷ್ಟು ತುಳಸಿ ರಸದೊಂದಿಗೆ ನಾಲ್ಕೈದು ಹನಿ ಶುಂಠಿ ರಸ ಸೇರಿಸಿ ಕುಡಿದರೆ ಹೊಟ್ಟೆನೋವು ಮಾಯ.

* ಎರಡು ಚಮಚ ಕೃಷ್ಣತುಳಸಿಯ ರಸವನ್ನು ಜೇನಿನೊಂದಿಗೆ ಕಲಸಿ ಸೇವಿಸಿದರೆ ಕೆಮ್ಮು ಶಮನಗೊಳ್ಳುವುದು.

* ಹೃದಯ ಸಂಬಂಧಿ ರೋಗದಿಂದ ಬಳಲುತ್ತಿರುವವರು ತುಳಸಿ ಎಲೆ ಸೇವನೆ ಮಾಡುವುದು ಒಳ್ಳೆಯದು. ಇದು ರಕ್ತದಲ್ಲಿನ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ.

* ದಿನಕ್ಕೆರಡು ಬಾರಿ 12 ತುಳಸಿ ಎಲೆಗಳನ್ನು ಜಗಿದು ತಿನ್ನುವುದರಿಂದ ದೇಹದಲ್ಲಿ ರಕ್ತ ಶುದ್ಧಿ ಮಾಡಲು ಸಹಾಯ ಮಾಡುತ್ತದೆ.

ಸೌಂದರ್ಯವರ್ಧಕವಾಗಿ
ತುಳಸಿ ಮೊಡವೆಗಳನ್ನು ನಿವಾರಣೆ ಮಾಡುತ್ತದೆ. ತುಳಸಿ ರಸಕ್ಕೆ ಚಿಟಿಕೆಯಷ್ಟು ಅರಿಶಿನ ಹಾಕಿಕೊಂಡು ಮಿಶ್ರಣ ಮಾಡಿಕೊಂಡು ಮುಖಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯ ಬಿಟ್ಟು ನೀರಿನಿಂದ ತೊಳೆಯಿರಿ.

ಸ್ವಲ್ಪ ತುಳಸಿ ಎಲೆಗಳನ್ನು ತೆಗೆದುಕೊಂಡು ಅದನ್ನು ದಪ್ಪಗಿನ ಪೇಸ್ಟ್ ಮಾಡಿಕೊಂಡು ಅದಕ್ಕೆ ಒಂದು ಚಮಚ ಜೇನುತುಪ್ಪ ಮತ್ತು ಒಂದು ಚಮಚ ಲಿಂಬೆರಸ ಮಿಶ್ರಣ ಮಾಡಿ, ಈ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಬಿಟ್ಟು ನೀರಿನಿಂದ ತೊಳೆಯಿರಿ.

ತುಳಸಿ ಎಲೆಗಳನ್ನು ಸರಿಯಾಗಿ ರುಬ್ಬಿಕೊಂಡು ಪೇಸ್ಟ್ ಮಾಡಿಕೊಂಡು ಅರ್ಧಕಪ್ ಮೊಸರು ಹಾಕಿ ಸರಿಯಾಗಿ ಮಿಶ್ರಣ ಮಾಡಿಕೊಂಡು ಮುಖಕ್ಕೆ ಹಚ್ಚಿಕೊಳ್ಳಬೇಕು. ಇದು ತ್ವಚೆ ಸ್ವಚ್ಛಗೊಳ್ಳುವುದರ ಜೊತೆಗೆ ಕಾಂತಿಯನ್ನೂ ಹೆಚ್ಚಿಸುತ್ತದೆ.

ಕಡಲೆಹಿಟ್ಟು, ಗುಲಾಬಿ ದಳಗಳ ರಸ (ರೋಸ್ ವಾಟರ್‌) ಮತ್ತು ತುಳಸಿಯ ಎಲೆಯನ್ನು ನುಣ್ಣಗೆ ರುಬ್ಬಿ ಪೇಸ್ಟ್ ಮಾಡಿಕೊಂಡು, ಮುಖ, ಕುತ್ತಿಗೆ, ಕೈಗಳಿಗೆ ಹಚ್ಚಬೇಕು. ಅರ್ಧ ಗಂಟೆ ನಂತರ ತಣ್ಣೀರಿನಿಂದ ತೊಳೆಯಬೇಕು. ಇದರಿಂದ ಚರ್ಮದ ಸಮಸ್ಯೆಗಳು ನಿವಾರಣೆಯಾಗಿ ಚರ್ಮ ನಯವಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT