ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರನ ಮುಂದೆ ಕೈ ಮುಗಿದು ನಿಂತ ಪೊಲೀಸ್

Last Updated 10 ಅಕ್ಟೋಬರ್ 2017, 9:55 IST
ಅಕ್ಷರ ಗಾತ್ರ

ಹೈದರಾಬಾದ್: ಸಂಚಾರ ನಿಯಮ ಉಲ್ಲಂಘನೆ ಮಾಡಬಾರದು ಎಂದು ಪದೇ ಪದೇ ಹೇಳುತ್ತಿದ್ದರೂ, ವಾಹನ ಸವಾರರು ಅದಕ್ಕೆ ಕಿವಿಗೊಡದೇ ಇದ್ದರೆ ಪಾಪ ಪೊಲೀಸರು ಮಾಡುವುದಾದರೂ ಏನು?
ರಸ್ತೆಯಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ಸವಾರರು ಪೊಲೀಸರ ಕಣ್ಣಿಗೆ ಬಿದ್ದೇ ಬೀಳುತ್ತಾರೆ. ಇಲ್ಲಿ ಆಗಿರುವುದೂ ಅದೇ. ದ್ವಿಚಕ್ರವಾಹನದಲ್ಲಿ 5 ಸದಸ್ಯರ ಕುಟುಂಬವೊಂದು ಸವಾರಿ ಮಾಡುತ್ತಿದ್ದುದನ್ನು ನೋಡಿ  ಪೊಲೀಸ್ ಅಧಿಕಾರಿಯೊಬ್ಬರು ಕೈ ಮುಗಿದು ನಿಂತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಫೋಟೊವನ್ನು ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಅಭಿಷೇಕ್ ಗೋಯಲ್ ಟ್ವೀಟ್ ಮಾಡಿದ್ದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT