ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸೇರ್ಪಡೆಗೆ ಯೋಗೇಶ್ವರ್‌ ಒಪ್ಪಿಗೆ

Last Updated 19 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಚನ್ನಪಟ್ಟಣ್ಣ ಶಾಸಕ ಸಿ.ಪಿ.ಯೋಗೇಶ್ವರ್ ಬಿಜೆಪಿ ಹಿರಿಯ ಮುಖಂಡರೊಂದಿಗೆ ಗುರುವಾರ ಮಾತುಕತೆ ನಡೆಸಿದ್ದು, ಬಿಜೆಪಿ ಸೇರಲು ಅವರು ಒಪ್ಪಿಕೊಂಡಿದ್ದಾರೆ.

ತಕ್ಷಣವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದರೆ, ಇನ್ನೊಂದು ಚುನಾವಣೆ ಎದುರಿಸಬೇಕಾಗಬಹುದು ಎಂಬ ಕಾರಣಕ್ಕೆ ಚುನಾವಣೆಗೆ ಒಂದೆರಡು ತಿಂಗಳ ಮೊದಲು ಬಿಜೆಪಿ ಸೇರುತ್ತಾರೆ. ಆದರೆ, ನವೆಂಬರ್‌ 2 ರಂದು ಕರ್ನಾಟಕ ಪರಿವರ್ತನೆ ರಥ ಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

‘ಯೋಗೇಶ್ವರ್‌ ಅವರು ಪಕ್ಷ ಸೇರಲು ಒಪ್ಪಿದ್ದಾರೆ. ಯಾವುದೇ ಷರತ್ತುಗಳನ್ನು ಹಾಕಿಲ್ಲ. ಇಂತಹ ಕ್ಷೇತ್ರಕ್ಕೆ ಟಿಕೆಟ್‌ ಕೊಡಿ ಎಂದೂ ಬೇಡಿಕೆ ಸಲ್ಲಿಸಲಿಲ್ಲ’ ಎಂದು ಮಾತುಕತೆ ನಡೆಸಿದ ಬೆಂಗಳೂರು ನಗರದ ಬಿಜೆಪಿ ಹಿರಿಯ ನಾಯಕರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಇನ್ನೂ ನಾಲ್ಕರಿಂದ ಐದು ಶಾಸಕರು ಬಿಜೆಪಿ ಸೇರಲು ಆಸಕ್ತಿ ತೋರಿಸಿದ್ದರು. ಅವರ ಜತೆಯೂ ಮಾತುಕತೆ ನಡೆಯುತ್ತಿದೆ. ಅವರೆಲ್ಲರೂ ಡಿಸೆಂಬರ್‌ ಬಳಿಕ ಪಕ್ಷ ಸೇರುವ ಸಾಧ್ಯತೆ ಇದೆ. ಈಗಲೇ ಹೆಸರು ಬಹಿರಂಗಡಿಸಲು ಸಾಧ್ಯವಿಲ್ಲ’ ಎಂದೂ ಅವರು ಹೇಳಿದರು.

‘ರಾಮನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬಿಜೆಪಿಗೆ ನೆಲೆ ಇಲ್ಲ. ಅಲ್ಲಿ ಪಕ್ಷವನ್ನು ಬಲಪಡಿಸಲು ಯೋಗೇಶ್ವರ್‌ ಅವರಿಗೆ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ಪಕ್ಷಕ್ಕೆ ಸೇರಿದ ಮೇಲೆ ಆ ಬಗ್ಗೆ ಚರ್ಚೆ ನಡೆಯಲಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT