ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ. 19ರಿಂದ 3 ದಿನ ರಾಹುಲ್‌ ರಾಜ್ಯ ಪ್ರವಾಸ

Last Updated 19 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಪ್ರಾಬಲ್ಯದ ಜಿಲ್ಲೆಗಳಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ವ್ಯಾಪಕ ಪ್ರಚಾರ ಕೈಗೊಳ್ಳಲಿದ್ದಾರೆ.

ಮೊದಲ ಹಂತವಾಗಿ ನ. 19ರಿಂದ ಮೂರು ದಿನ ರಾಜ್ಯದಲ್ಲಿ ರಾಹುಲ್‌ ಪ್ರವಾಸ ಕೈಗೊಳ್ಳಲಿದ್ದಾರೆ. ಮೊದಲ ದಿನ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಇಂದಿರಾ ಗಾಂಧಿ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

20ರಂದು ಬೆಳಿಗ್ಗೆ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿರುವ ರಾಹುಲ್‌, ಮಧ್ಯಾಹ್ನ ಶಿವಮೊಗ್ಗದಲ್ಲಿ ಪಕ್ಷದ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. 21ರಂದು ಕುಮಟಾದಲ್ಲಿ ನಡೆಯಲಿರುವ ಮೀನುಗಾರರ ರಾಜ್ಯ ಮಟ್ಟದ ಸಮಾವೇಶದಲ್ಲಿ ಭಾಗವಹಿಸುವರು ಎಂದು ಪಕ್ಷದ ಮೂಲಗಳು ತಿಳಿಸಿವೆ.

‘ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಬಿಜೆಪಿ, ಸಂಘ ಪರಿವಾರದ ಭದ್ರಕೋಟೆಗಳಾಗಿವೆ. ಆ ಜಿಲ್ಲೆಗಳಲ್ಲಿರುವ ಕಾರ್ಯಕರ್ತರಲ್ಲಿ ಹುರುಪು ತುಂಬಲು ಪಕ್ಷ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಪಕ್ಷದ ಸಮಾವೇಶಗಳಲ್ಲಿ ರಾಹುಲ್‌ ಭಾಗವಹಿಸುವುದರಿಂದ ತಳಮಟ್ಟದಲ್ಲಿ ಕಾರ್ಯಕರ್ತರನ್ನು ಚುರುಕುಗೊಳಿಸಬಹುದು ಎನ್ನುವುದು ನಾಯಕರ ನಿರೀಕ್ಷೆ’ ಎಂದೂ ಮೂಲಗಳು ತಿಳಿಸಿವೆ.

ಪರಮೇಶ್ವರ ಕೊನೆ ಚುನಾವಣೆ?
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು, ‘ಮುಂದಿನ ಚುನಾವಣೆ ನನ್ನ ಕೊನೆ ಚುನಾವಣೆ’ ಎಂದು ಹೇಳಿಕೆ ನೀಡುವ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದ್ದು, ಇದೀಗ ಆ ಸಾಲಿಗೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಕೂಡಾ ಸೇರಿದ್ದಾರೆ.

2013ರ ಚುನಾವಣೆಯಲ್ಲಿ ಸೋಲು ಕಂಡ ಕೊರಟಗೆರೆ ಕ್ಷೇತ್ರದಿಂದಲೇ ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿಯಲು ನಿರ್ಧರಿಸಿರುವ ಪರಮೇಶ್ವರ, ‘ಮುಂಬರುವ ಚುನಾವಣೆ ನನ್ನ ಕೊನೆ ಚುನಾವಣೆ. ಬಳಿಕ ರಾಜಕೀಯದಿಂದ ದೂರವಾಗಿ ಶಿಕ್ಷಣ ಸಂಸ್ಥೆಗಳ ಕಡೆಗೆ ಗಮನಹರಿಸಲು ಯೋಚಿಸಿದ್ದೇನೆ’ ಎಂದು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.

ಆ ಮೂಲಕ ಮತದಾರರನ್ನು ಭಾವನಾತ್ಮಕವಾಗಿ ಸೆಳೆಯಲು ಹೊರಟಿದ್ದಾರೆ. ಕಾಂಗ್ರೆಸ್‌ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಪರಮೇಶ್ವರ ಕೂಡಾ ಮುಖ್ಯಮಂತ್ರಿ ಹುದ್ದೆ ಪ್ರಬಲ ಆಕಾಂಕ್ಷಿಯಾಗಲಿದ್ದಾರೆ ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT