ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರಿಂದ ಸಕಾರಾತ್ಮಕ ಸ್ಪಂದನೆ: ಆರತಿಕೃಷ್ಣ

Last Updated 21 ಅಕ್ಟೋಬರ್ 2017, 6:18 IST
ಅಕ್ಷರ ಗಾತ್ರ

ನರಸಿಂಹರಾಜಪುರ: ತಾಲ್ಲೂಕಿನ ಮಾಗುಂಡಿ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆಯನ್ನು ಹಂತ ಹಂತವಾಗಿ ಬಗೆಹರಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‌ಕುಮಾರ್ ಭರವಸೆ ನೀಡಿದ್ದಾರೆ ಎಂದು ರಾಜ್ಯ ಅನಿವಾಸಿ ಭಾರತೀಯ ನಿಗಮದ ಉಪಾಧ್ಯಕ್ಷೆ ಡಾ.ಆರತಿಕೃಷ್ಣ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಮಾಗುಂಡಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು ಸದರಿ ಆರೋಗ್ಯ ಕೇಂದ್ರಕ್ಕೆ ಮೂಡಿಗೆರೆ, ಚಿಕ್ಕಮಗಳೂರು, ಎನ್.ಆರ್.ಪುರ ತಾಲ್ಲೂಕಿನ ಹುಯಿಗೆರೆ, ಬಿಕ್ಕರಣೆ, ಮಣಬೂರು, ಸಾರಗೋಡು, ಮಾಗುಂಡಿ, ಗಬ್ಬಲ್, ತಲಗೂರು, ಹಾದಿವೋಣಿ ಮುಂತಾದ ಗ್ರಾಮಗಳಿಂದ ನೂರಾರು ರೋಗಿಗಳು ದಿನನಿತ್ಯ ಬರುತ್ತಾರೆ.

ಈ ಭಾಗಗಳಲ್ಲಿ ಕಾರ್ಮಿಕರು ಹೆಚ್ಚಾಗಿದ್ದು ಇವರೆಲ್ಲರೂ ಸದರಿ ಆಸ್ಪತ್ರೆಯನ್ನು ಅವಲಂಭಿಸಿರುತ್ತಾರೆ. ಆದರೆ, ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಯು ಲಭ್ಯವಿಲ್ಲದಿರುವುದರಿಂದ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ ಅಗತ್ಯವಿರುವ ವೈದ್ಯರು, ಸಿಬ್ಬಂದಿ ಹಾಗೂ ಸಾಕಷ್ಟು ಔಷಧಿಗಳನ್ನು ಸರಬರಾಜು ಮಾಡುವಂತೆ ಸರ್ಕಾರದಿಂದ ಅಗತ್ಯ ಕ್ರಮಕೈಗೊಳ್ಳುವಂತೆ ಮನವಿಯನ್ನು ನನಗೆ ನೀಡಿದ್ದರು’ ಎಂದು ತಿಳಿಸಿದ್ದಾರೆ.

ಗ್ರಾಮಸ್ಥರ ಮನವಿಯ ಮೇರೆಗೆ ಕಳೆದ 16ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ರಮೇಶ್‌ ಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಲಾಯಿತು. ಇದಕ್ಕೆ ಸ್ಪಂದಿಸಿದ ಸಚಿವರು, ‘ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ವಿಳಂಬವಾಗಲಿದೆ.

ಹಾಗಾಗಿ ಸದರಿ ಆರೋಗ್ಯ ಕೇಂದ್ರದಲ್ಲಿ ದಿನದ 24 ಗಂಟೆಯೂ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುವಂತೆ ಮತ್ತು ಹೆಚ್ಚು ಹಾಸಿಗೆಗಳನ್ನು ಅಳವಡಿಸಲು, ಔಷಧಿ ಸಲಕರಣೆಗಳನ್ನು ಪೂರೈಸಲು ಸರ್ಕಾರದಿಂದ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು’ ಎಂದು ಹೇಳಿದ್ದಾರೆ. ಭೇಟಿ ಸಂದರ್ಭದಲ್ಲಿ ಗ್ರಾಮಸ್ಥರಾದ ಅಬ್ಧುಲ್ ವಹೀದ್, ಇರ್ಷಾದ್ ವಹಿದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT