ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ವೈದ್ಯರ ಪತ್ತೆಗೆ ವಿಶೇಷ ಪಡೆ

Last Updated 21 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು:‌ ನಕಲಿ ವೈದ್ಯರ ಹಾವಳಿ ತಡೆಗೆ ಪೊಲೀಸರು, ವೈದ್ಯರು ಮತ್ತು ವಕೀಲರನ್ನು ಒಳಗೊಂಡ ಜಿಲ್ಲಾ ಮಟ್ಟದ ವಿಶೇಷ ಪಡೆಗಳನ್ನು ರಚಿಸಲಾಗಿದೆ.

ಪ್ರತಿ ಜಿಲ್ಲೆಯಲ್ಲಿ ನಕಲಿ ವೈದ್ಯರನ್ನು ಪತ್ತೆ ಹಚ್ಚುವ ಹಾಗೂ ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈ ಪಡೆಗಳು ಕಾರ್ಯನಿರ್ವಹಿಸಲಿವೆ ಎಂದು ಡಿಜಿ–ಐಜಿಪಿ ಕಚೇರಿ ಆದೇಶ ತಿಳಿಸಿದೆ.

‘ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ವಿಚಕ್ಷಣ ದಳದ ಅಧಿಕಾರಿಗಳು ಈಗಾಗಲೇ ನಕಲಿ ವೈದ್ಯರ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ವ್ಯವಸ್ಥಿತವಾಗಿ ಕಾರ್ಯಾಚರಣೆ ನಡೆಸುವ ಉದ್ದೇಶದಿಂದ ವಿಶೇಷ ಪಡೆಗಳನ್ನು ರಚಿಸಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿಶೇಷ ಪಡೆ ಕಾರ್ಯಾಚರಣೆಗೆ ಇಳಿಯಲಿದೆ. ವೈದ್ಯಕೀಯ ವೃತ್ತಿಯಲ್ಲಿ ತೊಡಗಿರುವವರ ಶೈಕ್ಷಣಿಕ ದಾಖಲೆಗಳು ಹಾಗೂ ಅವರು ಆ ವೃತ್ತಿ ನಡೆಸಲು ಸಂಬಂಧಪಟ್ಟ ಸಂಸ್ಥೆಗಳಿಂದ ಪಡೆದುಕೊಂಡಿರುವ ಮಾನ್ಯತಾ ಪತ್ರಗಳನ್ನು ಪಡೆಯ ಸದಸ್ಯರು ಪರಿಶೀಲಿಸಲಿದ್ದಾರೆ. ಅಕ್ರಮವಾಗಿ ವೃತ್ತಿ ನಡೆಸುತ್ತಿದ್ದರೆ ಅಂಥವರ ವಿರುದ್ಧ ಮುಲಾಜಿಲ್ಲದೆ ಸ್ಥಳೀಯ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT