ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆ

Last Updated 22 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಗದಗ: ಇಲ್ಲಿನ ಪಾರ್ಶ್ವನಾಥ ಇಂಗ್ಲಿಷ್‌ ಮಾಧ್ಯಮ ಪ್ರೌಢಶಾಲೆಯಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಯೋಗಸ್ಪರ್ಧೆಯಲ್ಲಿ ಭಾಗವಹಿಸಿದ್ದ ಬೆಂಗಳೂರಿನ ಎಂಟು ಮಂದಿ ಯೋಗಪಟುಗಳು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

14 ವರ್ಷದೊಳಗಿನ ಬಾಲಕರ ವಿಭಾಗದ ಕಲಾತ್ಮಕ ಯೋಗ ಸ್ಪರ್ಧೆಯಲ್ಲಿ ಭಾರದ್ವಾಜ ಎಸ್.ಎಂ ಹಾಗೂ ಬಾಲಕಿಯರ ವಿಭಾಗದ ವೈಯಕ್ತಿಕ ಸ್ಪರ್ಧೆಯಲ್ಲಿ ನಿಧಿಶ್ರೀ ಆಯ್ಕೆಯಾಗಿದ್ದಾರೆ.

17 ವರ್ಷದೊಳಗಿನ ವಿಭಾಗದ ಬಾಲಕರ ವೈಯಕ್ತಿಕ ಸ್ಪರ್ಧೆಯಲ್ಲಿ ಸೇವಂತಕುಮಾರ, ಅಶ್ವಿನಕುಮಾರ ಜಿ, ವರಪ್ರಸಾದ ಹಾಗೂ ಕಲಾತ್ಮಕ ಯೋಗದಲ್ಲಿ ಡಿ.ಮಹೇಂದ್ರ ಆಯ್ಕೆಯಾಗಿದ್ದಾರೆ. ಬಾಲಕಿಯರ ವೈಯಕ್ತಿಕ ಸ್ಪರ್ಧೆಯಲ್ಲಿ ಸಂಧ್ಯಾ ಎಂ.ಎನ್, ಗಾನಶ್ರೀ ಎ. ಉತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರ್ಗಿ ವಿಭಾಗ
ಗಳ ವಿವಿಧ ಜಿಲ್ಲೆಗಳ 112 ಯೋಗಪಟುಗಳು ಭಾಗವಹಿಸಿದ್ದರು. ಅವರಲ್ಲಿ 28 ಮಂದಿ ಆಯ್ಕೆಯಾಗಿದ್ದು, ಛತ್ತೀಸ್‌ಗಡದಲ್ಲಿ ನ.7ರಂದು ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT