ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದಾಯ ಸಚಿವರ ಮನೆ ಮುಂದೆ ಧರಣಿ

Last Updated 6 ನವೆಂಬರ್ 2017, 5:04 IST
ಅಕ್ಷರ ಗಾತ್ರ

ದೇವನಹಳ್ಳಿ: ಭೂಸ್ವಾಧೀನ ಕಾಯ್ದೆ ನೆಪದಲ್ಲಿ ರೈತರನ್ನು ಒಕ್ಕಲೆಬ್ಬಿಸಲು ತಂದಿರುವ ವಿಶೇಷ ಭೂ ಸ್ವಾಧೀನ ಕಾಯ್ದೆ ರದ್ದು ಪಡಿಸುವಂತೆ ಅಗ್ರಹಿಸಿ ಕಂದಾಯ ಸಚಿವರ ಮನೆ ಮುಂದೆ ನ.8 ರಂದು ಧರಣಿ ನಡೆಸಲಾಗುತ್ತಿದೆ ಎಂದು ಪ್ರಾಂತ ರೈತ ಸಂಘ ಜಿಲ್ಲಾ ಘಟಕ ಅಧ್ಯಕ್ಷ ಎನ್.ವೀರಣ್ಣ ತಿಳಿಸಿದರು.

ಧರಣಿ ಕುರಿತು ಚರ್ಚಿಸಲು ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸರ್ಕಾರ ಮಹಾನಗರ ಪಾಲಿಕೆ ವ್ಯಾಪ್ತಿಯಿಂದ 18.ಕಿ.ಮೀ ಮತ್ತು ನಗರಸಭೆ ಪುರಸಭೆ ವ್ಯಾಪ್ತಿಯ 10 ಕಿ.ಮೀ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 5.ಕಿ.ಮೀ ಒಳ ಪಟ್ಟು ರೈತರು ಅನೇಕ ವರ್ಷಗಳಿಂದ ಸ್ವಾಧೀನದಲ್ಲಿದ್ದು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರೂ ಈವರೆಗೂ ಹಕ್ಕುಪತ್ರ ನೀಡಲು ಮುಂದಾಗಿಲ್ಲ. ಭೂಸ್ವಾಧೀನ ನೆಪದಲ್ಲಿ ಉಳುಮೆ ಚೀಟಿ ನೀಡಿಲ್ಲ. ಸರ್ಕಾರ ಪರೋಕ್ಷವಾಗಿ ರೈತರ ಮೇಲೆ ಪ್ರಹಾರ ಮಾಡುತ್ತಿದೆ ಎಂದು ದೂರಿದರು.

ಜಿಲ್ಲೆ ಮತ್ತು ರಾಜ್ಯಾದ್ಯಂತ ಆನೇಕ ಬಡ ಕುಟುಂಬಗಳು ಬಗರ್ ಹುಕುಂ ಸಾಗುವಳಿಯಲ್ಲಿ ತೊಡಗಿಸಿ ಅಲ್ಲಿಯೇ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡಿಕೊಂಡಿದ್ದಾರೆ. ಆದರೆ, ಸರ್ಕಾರ ಹಕ್ಕಪತ್ರ ನೀಡಿಲ್ಲ. ಸರ್ಕಾರ ರೈತ ಮುಖಂಡರನ್ನು ಕರೆದು ಅನೇಕ ಬಾರಿ ಚರ್ಚೆ ನಡೆಸಿದೆ. ಬೇಡಿಕೆಗಳ ಈಡೇರಿಕೆಗೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ನೀಡಿದ ಭರವಸೆಯಂತೆ ನಡೆದುಕೊಂಡಿಲ್ಲ. ಸಬೂಬು ಹೇಳಿಕೊಂಡು ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದರು.

ದೇವನಹಳ್ಳಿ ಮತ್ತು ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಪೇಗೌಡ ಬಡಾವಣೆಯಲ್ಲಿ ಬಗರು ಹುಕುಂ ಸಾಗುವಳಿ ಮಾಡುತ್ತಿದ್ದ ರೈತರ ಫಲವತ್ತಾದ ಭೂವಿಯನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವಶಪಡಿಸಿಕೊಂಡಿದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ವಶಪಡಿಸಿಕೊಂಡ ರೈತರ ಭೂಮಿಗೆ ನೀಡಿರುವ ಪರಿಹಾರದಂತೆ ಇಲ್ಲಿಯೂ ನೀಡಬೇಕು ಎಂದು ಒತ್ತಾಯಿಸಲಾಗುವುದು. ಒಟ್ಟು 12 ಬೇಡಿಕೆ ಮುಂದಿಟ್ಟುಕೊಂಡು ಧರಣಿ ನಡೆಸಲಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT