ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಾ ಕೂಲಿ ಪಾವತಿ ಭರವಸೆ ಧರಣಿ ಕೈಬಿಟ್ಟ ಕಲ್ಲೂರ ಗ್ರಾಮಸ್ಥರು

Last Updated 6 ನವೆಂಬರ್ 2017, 6:34 IST
ಅಕ್ಷರ ಗಾತ್ರ

ಮುಳಗುಂದ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಪಡಿಸಿ ಚಿಂಚಲಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಎರಡು ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಕಲ್ಲೂರ ಗ್ರಾಮಸ್ಥರು ಹಿಂಪಡೆದರು.

ಧರಣಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಸಿ.ಆರ್.ಮುಂಡರಗಿ ಅವರು ಉದ್ಯೋಗ ಖಾತ್ರಿ ಯೋಜನೆಯಡಿ ಬಾಕಿ ಉಳಿಸಿಕೊಂಡಿರುವ ಕೂಲಿ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡುವ ಹಾಗೂ ದುಡಿಯುವ ಕೈಗಳಿಗೆ ಕೆಲಸ ನೀಡುವ ಭರವಸೆ ನೀಡಿದ ನಂತರ ಪ್ರತಿಭಟನಾ ನಿರತರು ಧರಣಿ ಹಿಂಪಡೆದರು.

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡದಿರುವ ಕುರಿತು ಅರ್ಜಿ ಸಲ್ಲಿಸಿದರೆ ನಿರುದ್ಯೋಗ ಭತ್ಯೆ ನೀಡಲಾಗುವುದು. ಅಲ್ಲದೇ, ಜಲಾಯನ ಇಲಾಖೆಯಲ್ಲಿ ಉದ್ಯೋಗ ಖಾತ್ರಿ ಕೆಲಸ ಕೈಗೊಳ್ಳಲು ₹ 2.17 ಕೋಟಿ ಇದ್ದು ಇದಕ್ಕೆ ಸಂಬಂಧಿಸಿ ಕ್ರಿಯಾ ಯೋಜನೆಯನ್ನು ಗ್ರಾಮ ಪಂಚಾಯ್ತಿಯವರು ತಯಾರಿಸಿ ಕೊಡಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ವೈ.ಪೂಜಾರ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೆಶಕ ಮೌನೇಶ ಬಡಿಗೇರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೀಪಾಬಾಯಿ ಕುಲಕರ್ಣಿ, ಪಿಡಿಒ ಎಂ.ಬಿ.ದೇಸಾಯಿ, ಪಿಎಸ್ಐ ಚಂದ್ರಪ್ಪ ಈಟಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಲ್ಲೂರ ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT