ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಂದ್ವ ನಿಲುವು ಬಿಟ್ಟು ಹೋರಾಟಕ್ಕೆ ಬನ್ನಿ

Last Updated 6 ನವೆಂಬರ್ 2017, 6:58 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಅಖಿಲ ಭಾರತ ವೀರಶೈವ ಮಹಾಸಭಾ, ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಅಡ್ಡಿಯಾಗಿದೆ. ಅದು ತನ್ನ ದ್ವಂದ್ವ ನಿಲುವು ಬಿಟ್ಟು ಹೋರಾಟಕ್ಕೆ ಬೆಂಬಲ ಸೂಚಿಸಬೇಕು. ಇಲ್ಲದಿದ್ದರೆ, ಮತ್ತೊಂದು ಪರ್ಯಾಯ ಸಂಸ್ಥೆ ಕಟ್ಟುತ್ತೇವೆ’ ಎಂದು ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದ ಸಿದ್ದರಾಮ ಸ್ವಾಮೀಜಿ ಎಚ್ಚರಿಕೆ ನೀಡಿದರು.
ನಗರದ ನೆಹರೂ ಮೈದಾನದಲ್ಲಿ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗಾಗಿ ಭಾನುವಾರ ನಡೆದ ಬೃಹತ್‌ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕು. ವಚನಗಳೇ ‘ಧರ್ಮ ಗ್ರಂಥ’ ಎನ್ನುವುದನ್ನು ಒಪ್ಪಬೇಕು. ಹೋರಾಟ ಕುರಿತು ಹೊಂದಿರುವ ತನ್ನ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ಳದಿದ್ದರೆ ಪರ್ಯಾಯವಾಗಿ ‘ಅಖಿಲ ಭಾರತ ಲಿಂಗಾಯತ ಮಹಾಪರಿಷತ್‌’ ರಚನೆ ಅನಿವಾರ್ಯವಾಗುತ್ತದೆ’ ಎಂದು ಅವರು ಹೇಳಿದರು.

ನಿರ್ಣಯ: ಲಿಂಗಾಯತ ಪ್ರತ್ಯೇಕ ಧರ್ಮ ರಚನೆ ಕುರಿತಾದ ಶಿಫಾರಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಕೇಂದ್ರಕ್ಕೆ ಕಳುಹಿಸಬೇಕು. ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಅದಕ್ಕೆ ಒಪ್ಪಿಗೆ ನೀಡಬೇಕು ಎಂಬ ನಿರ್ಣಯವನ್ನು ಸಮಾವೇಶದಲ್ಲಿ ಕೈಗೊಳ್ಳಲಾಯಿತು. ಡಾ.ಸಿ.ಜಯಣ್ಣ ನಿರ್ಣಯ ಓದಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT