ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಸಪ್ತಾಹ, ವಿದ್ಯಾರ್ಥಿಗಳಿಂದ ಜಾಗೃತಿ ಜಾಥ

Last Updated 6 ನವೆಂಬರ್ 2017, 8:29 IST
ಅಕ್ಷರ ಗಾತ್ರ

ಕನಕಗಿರಿ: ಇಂಗ್ಲಿಷ್ ಮಾಧ್ಯಮದ ಶಾಲೆಗಳ ವಿದ್ಯಾರ್ಥಿಗಳು ಕನ್ನಡ ಕಲಿಕೆಯಲ್ಲಿ ಹಿಂದುಳಿದಿದ್ದು ಭಾಷೆಯ ಬೆಳವಣಿಗೆ, ಕಾಗುಣಿತ ದೋಷ, ಒತ್ತಕ್ಷರದ ಅರಿವು ಮೂಡಿಸುವುದು ಅಗತ್ಯ ಎಂದು ಮುಖ್ಯ ಶಿಕ್ಷಕಿ ಅರುಣಕುಮಾರಿ ವಸ್ತ್ರದ ತಿಳಿಸಿದರು.

ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಎಕ್ಸೆಲ್‌ ಪಬ್ಲಿಕ್ ಶಾಲೆ ಭಾನುವಾರ ಆಯೋಜಿಸಿದ್ದ ಕನ್ನಡ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ನ. 10 ರಂದು ಕನ್ನಡ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದ್ದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಸ್. ಬಿ. ಗೊಂಡಬಾಳ ಅವರು ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುವರು ಎಂದು ಅವರು ಹೇಳಿದರು.

ಶಿಕ್ಷಕರಾದ ತಬಸೂಮ, ಪ್ರಶಾಂತ ಕಾಟಾಪುರ ಮಾತನಾಡಿದರು. ಶಿಕ್ಷಕರಾದ ಪ್ರಶಾಂತ, ಸಲ್ಮಾ, ನಂದಿನಿ ಚಿಂತಕುಂಠಿಮಠ, ಪವಿತ್ರ, ಅನ್ನಪೂರ್ಣ, ಅನಿತಾ, ಸೀಮಾ, ಮಮತಾ, ದೀಪಾ, ಮಂಜುಳಾ ಉಪ್ಪಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT