ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಸಾಲ ಮನ್ನಾಗೆ ಆಗ್ರಹಿಸಿ ಅರ್ಜಿ ಸಲ್ಲಿಕೆ ಅಭಿಯಾನ

Last Updated 6 ನವೆಂಬರ್ 2017, 8:52 IST
ಅಕ್ಷರ ಗಾತ್ರ

ಸರಗೂರು: ಕೃಷಿ ಸಾಲ ಮನ್ನಾಗೆ ಆಗ್ರಹಿಸಿ ರೈತ ಸಂಘಟನೆಗಳು ಹಮ್ಮಿಕೊಂಡಿರುವ ಅರ್ಜಿ ಸಲ್ಲಿಸುವ ಅಭಿಯಾನಕ್ಕೆ ದಡದಹಳ್ಳಿ ಶಾಖಾ ಮಠದಲ್ಲಿ ಷಡಕ್ಷರಿ ಸ್ವಾಮೀಜಿ ಚಾಲನೆ ನೀಡಿದರು.

‘ಈ ಸಂಬಂಧ ಒತ್ತಾಯಿಸಲು ಕಬ್ಬು ಬೆಳೆಗಾರರ ಸಂಘ ಮೈಸೂರಿನಲ್ಲಿ ನ.7ರಂದು ಸಮಾವೇಶ ಏರ್ಪಡಿಸಿದೆ ಎಂದರು. ರೈತ ದೇಶದ ಬೆನ್ನೆಲುಬು. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರ ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಸಾಲ ಮನ್ನಾ ಆಗದಿರುವುದು ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಲು ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌, ‘ ಬೆಳೆನಷ್ಟದಿಂದ ರೈತ ಸಂಕಷ್ಟದಲ್ಲಿದ್ದಾನೆ. ಕೃಷಿ ಉತ್ಪನ್ನಗಳಿಗೆ ಡಾ.ಸ್ವಾಮಿನಾಥನ್ ವರದಿಯಂತೆ ಉತ್ಪಾದನೆ ವೆಚ್ಚದ ಜತೆಗೆ ಶೇ 50 ಲಾಭಾಂಶ ಸೇರಿಸಿ ಘೋಷಿಸಬೇಕು ಎಂದು ಆಗ್ರಹಪಡಿಸಿದರು.

ಮುಂದಿನ ಹಂಗಾಮಿನ ಕೃಷಿ ಚಟುವಟಿಕೆಗಾಗಿ ಹೊಸ ಸಾಲವನ್ನು ನೀಡುವಂತೆ ಆಗಬೇಕು ಎಂದು ಒತ್ತಾಯಿಸಿದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ತಾಲ್ಲೂಕು ಘಟಕದ ಅಧ್ಯಕ್ಷ ಮಾದಪ್ಪ, ಕಾರ್ಯದರ್ಶಿ ಬಸವರಾಜು, ರವಿ ಮಾಗುಡಿಲು, ಮುಖಂಡ ನಂಜಪ್ಪ, ಮಚ್ಚರೆ ನಾರಾಯಣ, ಸುರೇಶ್ ಶೆಟ್ಟಿ, ಬಸವಣ್ಣ, ಲಿಂಗೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT