ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗ ಧರಿಸಿದವರಿಂದ ಜಾತೀಯತೆ: ಸ್ವಾಮೀಜಿ

Last Updated 6 ನವೆಂಬರ್ 2017, 9:07 IST
ಅಕ್ಷರ ಗಾತ್ರ

ರಾಯಚೂರು: ‘ಜಾತೀಯತೆ ಹೋಗಲಾಡಿಸಲು ಬಸವಣ್ಣ ಲಿಂಗಧಾರಣೆ ಮಾಡಿಸಿದ್ದಾರೆ. ಆದರೆ ಲಿಂಗಧಾರಣೆ ಮಾಡಿದವರಿಂದಲೇ ಜಾತೀಯತೆ ಹೆಚ್ಚಾಗಿದೆ’ ಎಂದು ಇಲಕಲ್‌ನ ಚಿತ್ತರಗಿ ಸಂಸ್ಥಾನ ಮಠದ ವಿಜಯ ಮಹಾಂತ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.

ನಗರದ ಪಂಡಿತ್‌ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಾತೋಶ್ರೀ ಮಹಾಂತಮ್ಮ ಶಿವಬಸಪ್ಪ ಗೋನಾಳ ಪ್ರತಿಷ್ಠಾನ ಮತ್ತು ಪ್ರತಿಭಾ ಸುಗಮ ಸಂಗೀತ ಸಂಸ್ಥೆಯ 8ನೇ ವಾರ್ಷಿಕೋತ್ಸವ ಅಂಗವಾಗಿ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಭಾವ ಸಂಗಮ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.

‘ಜಾತಿ ವ್ಯವಸ್ಥೆ ತೊಲಗಿಸಲು ಮುಂದಾಗಬೇಕಾದ ಲಿಂಗ ಧರಿಸಿದವರು ಜಾತಿ ತಾರತಮ್ಯ ಮಾಡಬಾರದು. ದಲಿತರೊಂದಿಗೆ ಕೊಡುಕೊಳ್ಳುವಿಕೆ ಮಾಡುವ ಮೂಲಕ ಸಂಬಂಧ ಬೆಳೆಸಬೇಕು. ಅಂದಾಗ ಲಿಂಗಧಾರಣೆ ಮಾಡಿದ್ದಕ್ಕೆ ಅರ್ಥ ಬರಲಿದೆ’ ಎಂದರು.

‘ಬಸವಣ್ಣನವರ ಅನುಯಾಯಿಗಳು ಅವರ ತತ್ವ ಸಿದ್ಧಾಂತವನ್ನು ಅಳವಡಿಸಿಕೊಳ್ಳಬೇಕು. ಮಾನವೀಯತೆ ಬೆಳೆಸಿಕೊಂಡು ಎಲ್ಲರನ್ನೂ ಸಮಾನತೆಯಿಂದ ಕಾಣುವ ಮೂಲಕ ಬಸವಣ್ಣನವ ಮಾರ್ಗವನ್ನು ಅನುಸರಿಸಬೇಕು’ ಎಂದು ತಿಳಿಸಿದರು.

ಶಾಸಕ ಡಾ.ಶಿವರಾಜ ಪಾಟೀಲ ಮಾತನಾಡಿ, ಎಲೆಮರ ಕಾಯಿಯಂತೆ ಇರುವ ಸಾಧಕರನ್ನು ಗುರುತಿಸುವ ಕಾರ್ಯ ಮಾದರಿ ಕೆಲಸ ಎಂದು ತಿಳಿಸಿದರು. ವಿಜಯ ಮಹಾಂತ ಅನುಗ್ರಹ ಪ್ರಶಸ್ತಿ ಸ್ವೀಕರಿಸಿದ ಬೆಂಗಳೂರಿನ ಮಹೇಶ ಜೋಷಿ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌.ಬೋಸರಾಜು, ಜಿಲ್ಲಾ ಪಂಚಾಯಿತಿ ಸದಸ್ಯ ಮಹಾಂತೇಶ ಪಾಟೀಲ ಅತ್ತನೂರು ಮಾತನಾಡಿದರು. ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ, ಚಿಕ್ಕಸುಗೂರಿನ ಚೌಕಿಮಠದ ಸಿದ್ಧಲಿಂಗ ಸ್ವಾಮೀಜಿ, ಎಪಿಎಂಸಿ ಅಧ್ಯಕ್ಷ ಅಮರೇಗೌಡ ಹಂಚಿನಾಳ, ಮಹಾಂತೇಶ ಮಸ್ಕಿ, ಕೆ.ಶಾಂತಪ್ಪ, ರುದ್ರಪ್ಪ ಅಂಗಡಿ, ಜಿ.ಸುರೇಶ, ರವಿಪಾಟೀಲ, ಕೇಶವರೆಡ್ಡಿ, ಪ್ರತಿಷ್ಠಾನದ ಅಧ್ಯಕ್ಷ ಶರಣಪ್ಪ ಗೋನಾಳ, ದಂಡಪ್ಪ ಬಿರಾದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT