ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಷೆಯ ಉಳಿವಿಗೆ ಭಾಷಾ ಸಂಹಿತೆ ಅಗತ್ಯ

Last Updated 6 ನವೆಂಬರ್ 2017, 10:00 IST
ಅಕ್ಷರ ಗಾತ್ರ

ಕೋಟ(ಬ್ರಹ್ಮಾವರ):‘ಬೆಂಗಳೂರಿನಂತಹ ನಗರದಲ್ಲಿ ಶೇ 78ರಷ್ಟು  ಇತರ ಭಾಷಿಕರು ತುಂಬಿದ್ದಾರೆ.  ಕನ್ನಡದ ಉಳಿವಿಗೆ ಭಾಷಾ ಸಂಹಿತೆ ಅಗತ್ಯವಿದೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಹೇಳಿದರು. ಕೋಟ ಪಂಚವರ್ಣ ಯುವಕ ಮಂಡಲದ ವತಿಯಿಂದ ನೀಡುವ ಶುಕ್ರವಾರ ಕೊಡಮಾಡಿದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

‘ಕರಾವಳಿಯಲ್ಲಿ ಕನ್ನಡದ ಉಳಿವಿಗೆ ಯಕ್ಷಗಾನ ಪಾತ್ರ ಅಪಾರವಾದುದು. ಕನ್ನಡ ಧ್ವಜದ ಕುರಿತು ಕನ್ನಡಿಗರಿಗೆ ಭಾವನಾತ್ಮಕ ಸಂಬಂಧವಿದೆ. ರಾಷ್ಟ್ರ ಧ್ವಜಕ್ಕೆ ಅವಮಾನವಾಗದ ರೀತಿ ಯಲ್ಲಿ ಅದನ್ನು ಬಳಸಿಕೊಳ್ಳುವ ಕಾಯ್ದೆ ಜಾರಿಯಾಗಬೇಕು’ ಎಂದರು.

ಕೋಟ ಅಮೃತೇಶ್ವರೀ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಆನಂದ ಸಿ.ಕುಂದರ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಶುಭ ಹಾರೈಸಿದರು.

ಸನ್ಮಾನ,ನೆರವು: ಜೀವರಕ್ಷಕ ಪ್ರಶಸ್ತಿ ಪುರಸ್ಕೃತ ನಾಗರಾಜ ಪುತ್ರನ್, ಬ್ಯಾಂಕಿಂಗ್ ಕ್ಷೇತ್ರದ ಸಾಧಕ ಬಿ.ಪ್ರಭಾ ಕರ ಶೆಟ್ಟಿಗಾರ್, ಈಜುಪಟು ವಿಜಯ ಕಾಂಚನ್, ಅಂತರಾಷ್ಟ್ರೀಯ ದೇಹದಾ ರ್ಢ್ಯ ಪಟು ಅಶೋಕ್ ಜಿ.ವಿ, ಕೋಟ ಸುರೇಶ್, ನೀಲಾವರ ಸುರೇಂದ್ರ ಅಡಿಗ ಅವರನ್ನು ಸನ್ಮಾನಿಸಲಾಯಿತು. ತೆಕ್ಕಟ್ಟೆ ಯಶಸ್ವಿ ಕಲಾವೃಂದಕ್ಕೆ ವಿಶೇಷ ಪುರಸ್ಕಾರವನ್ನು ನೀಡಲಾಯಿತು. ಆರೋಗ್ಯ ನಿಧಿ, ಅಂಗನವಾಡಿ ಮಕ್ಕಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ಬಾರಿಕೆರೆ ರಾಘವೇಂದ್ರ ಕಾಂಚನ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಕೊಳ್ಕೆಬೈಲು ಕಿಶನ್ ಹೆಗ್ಡೆ, ಖ್ಯಾತ ಮನೋವೈದ್ಯ ಡಾ.ಪ್ರಕಾಶ್ ತೋಳಾರ್, ಉದ್ಯಮಿ ಬಡಾಮನೆ ರತ್ನಾಕರ ಶೆಟ್ಟಿ, ರೋಟರಿ ಕ್ಲಬ್ ಕೋಟ ಸಿಟಿ ಅಧ್ಯಕ್ಷ ಎಂ.ಸುಬ್ರಾಯ ಆಚಾರ್ಯ, ಕೆ.ಎಂ.ಸಿಯ ಅಧಿಕಾರಿ ಜಯವಿಠಲ್, ಕೋಟ ಸತೀಶ್ ಉರಾಳ, ಜಯ ಕರ್ನಾಟಕ ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಸತೀಶ್ ಪೂಜಾರಿ, ವಕೀಲ ಶ್ರೀಧರ ಪಿ.ಎಸ್, ಉಡುಪಿ ನಗರ ಸಭೆ ಮಾಜಿ ಅಧ್ಯಕ್ಷ ಹೆರ್ಗ ದಿನಕರ ಶೆಟ್ಟಿ, ಸೃಷ್ಟಿ ಮಣಿಪಾಲದ ಜೈರಾಜ್ ಶೆಟ್ಟಿ, ಯುವಕ ಮಂಡಲದ ಗೌರವಾಧ್ಯಕ್ಷ ಕೆ.ವೆಂಕಟೇಶ್ ಪ್ರಭು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT