ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹನೀಯರನ್ನು ಜಾತಿಗೆ ಸೀಮಿತಗೊಳಿಸಬೇಡಿ

Last Updated 7 ನವೆಂಬರ್ 2017, 5:24 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಜಗತ್ತಿಗೆ ಉತ್ತಮ ಸಂದೇಶ ಸಾರಿದ ಮಹನೀಯರನ್ನು ಒಂದು ಜಾತಿ ಪಂಗಡಕ್ಕೆ ಸೀಮಿತಗೊಳಿಸಿ, ಆವರ ಆಶಯಗಳಿಗೆ ಭಂಗ ತರುತ್ತಿರುವುದು ಸರಿಯಲ್ಲ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ  ಸ್ಥಳೀಯ ತಾಲ್ಲೂಕು ಕಚೇರಿ ಆವರಣದಲ್ಲಿ ಸೋಮವಾರ ನಡೆದ ಸಂತ ಶ್ರೇಷ್ಠ ಕನಕದಾಸರ ಜಯಂತ್ಯುತ್ಸವದಲ್ಲಿ ಮಾತನಾಡಿದರು.

ಹಿಂದುಳಿದ ವರ್ಗಗಳ ಏಳಿಗೆಗಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರ ಹಲವಾರು ಕಾರ್ಯಕ್ರಮ ರೂಪಿಸಿದ್ದು, ಇದರಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಮುಂಚೂಣಿಯಲ್ಲಿದೆ ಎಂದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್‌.ವಿ.ಶ್ರೀವತ್ಸ, ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್, ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ನಗರಸಭೆ ಸದಸ್ಯ ಟಿ.ಎನ್.ಪ್ರಭುದೇವ್ ಮಾತನಾಡಿದರು.

ನಗರಸಭೆ ಉಪಾಧ್ಯಕ್ಷೆ ಜಯಲಕ್ಷ್ಮೀ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಮೀನಾಕ್ಷಿ ಕೆಂಪಣ್ಣ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರ್ ಬಿ.ಎ.ಮೋಹನ್, ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಚುಂಚೇಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ರವಿ ಹಸನ್‌ಘಟ್ಟ, ನಾರಾಯಣಗೌಡ, ನಗರಸಭಾ ಸದಸ್ಯರಾದ ಮಂಜುಳ, ಮಮತಾಶ್ರೀ, ಟಿಎಪಿಎಂಸಿ ಅಧ್ಯಕ್ಷ ಬಿ.ಅಶ್ವತ್ಥನಾರಾಯಣ, ಎಪಿಎಂಸಿ ನಿರ್ದೇಶಕ ಕೆ.ಸಿ.ಲಕ್ಷ್ಮೀನಾರಾಯಣ್, ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಎಂ.ಬೈರೇಗೌಡ, ನಗರ ಘಟಕದ ಅಧ್ಯಕ್ಷ ಕೆ.ಜಿ.ಅಶೋಕ್, ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಅಧ್ಯಕ್ಷ ರಾಜ್‌ಕುಮಾರ್ ಭಾಗವಹಿಸಿದ್ದರು.

ಭಾವಚಿತ್ರದ ಮೆರವಣಿಗೆ: ಸಮಾರಂಭಕ್ಕೂ ಮುನ್ನ ತಾಲ್ಲೂಕು ಕಚೇರಿ ಆವರಣದಿಂದ ಕನಕದಾಸ ಭಾವಚಿತ್ರದ ಮೆರವಣಿಗೆಗೆ ಉಪವಿಭಾಗಾಧಿಕಾರಿ ಎನ್.ಮಹೇಶ್‌ಬಾಬು ಚಾಲನೆ ನೀಡಿದರು. ಶಾಸಕ ಟಿ.ವೆಂಕಟರಮಣಯ್ಯ ಹಾಜರಿದ್ದರು. ನಗರದ ಪ್ರಮುಖ ಬೀದಿಗಳಲ್ಲಿ ನಡೆದ ಮೆರವಣಿಗೆಯಲ್ಲಿ ಜನಪದ ಕಲಾತಂಡಗಳು ಭಾಗವಹಿಸಿದ್ದವು.

ಬಾರದ ಸನ್ಮಾನಿತರು: ಜಯಂತ್ಯುತ್ಸವ ಸಮಾರಂಭದ ಆಹ್ವಾನ ಪತ್ರಿಕೆಯಲ್ಲಿ ಕುರುಬ ಸಮಾಜದ ಅಧ್ಯಕ್ಷರ ಹೆಸರನ್ನು ಹಾಕಿಲ್ಲ, ಕುರುಬ ಸಮಾಜದ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರು ಸೇರಿದಂತೆ ಬಹಳಷ್ಟು ಮುಖಂಡರು ಮೆರವಣಿಗೆಗೆ ಹಾಗೂ ಸಮಾರಂಭಕ್ಕೆ ಗೈರು ಹಾಜರಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಇದರಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕುರುಬ ಸಮಾಜದ ಗಣ್ಯರ ಗೈರು ಎದ್ದು ಕಾಣುತ್ತಿತ್ತು.

ಶಾಸಕರ ಸ್ಪಷ್ಟನೆ: ಪ್ರತಿಕ್ರಿಯಿಸಿದ ಶಾಸಕ ಟಿ. ವೆಂಕಟರಮಣಯ್ಯ, ‘ಕುರುಬ ಸಮಾಜದ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರ ಹೆಸರು ಕೈಬಿಟ್ಟ ಬಗ್ಗೆ ಅಧಿಕಾರಿಗಳಿಂದ ಸ್ಪಷ್ಟನೆ ಕೇಳಲಾಗಿದ್ದು, ಶಿಷ್ಟಾಚಾರದಂತೆ ಎಲ್ಲ ಜಯಂತಿಗಳಲ್ಲಿ ಮುದ್ರಿಸುವ ಹಾಗೆ ಗಣ್ಯರ ಹೆಸರನ್ನು ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಲ್ಲಿ ನನ್ನ ಪಾತ್ರವೇನೂ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT