ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರತಿವರ್ಷ 220ಕ್ಕೂ ಹೆಚ್ಚು ರೈತರಿಗೆ ತರಬೇತಿ’

Last Updated 7 ನವೆಂಬರ್ 2017, 6:36 IST
ಅಕ್ಷರ ಗಾತ್ರ

ಗದಗ: ನಗರದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಇತ್ತೀಚೆಗೆ ಪ್ರಗತಿಪರ ರೈತ ಮಹಿಳೆಯರಿಗಾಗಿ ಆಧುನಿಕ ಕೃಷಿ ತಂತ್ರಜ್ಞಾನಗಳ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು. ‘ಕೃಷಿಯಲ್ಲಿ ತಂತ್ರಜ್ಞಾನದ ಸದ್ಬಳಕೆ, ಬೀಜ ಸಂರಕ್ಷಣೆ, ಸಮಗ್ರ ಕೃಷಿ ಪದ್ಧತಿ ಅಳವಡಿಕೆ, ಕೌಶಲ ಅಭಿವೃದ್ಧಿ ಸೇರಿದಂತೆ ವಿವಿಧ ತರಬೇತಿ ಕಾರ್ಯಾಗಾರಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿವರ್ಷ ಕೃಷಿ ವಿಸ್ತರಣಾ ಕೇಂದ್ರದಿಂದ 220ಕ್ಕೂ ಹೆಚ್ಚು ರೈತರಿಗೆ ತರಬೇತಿ ನೀಡಲಾಗುತ್ತಿದೆ’ ಎಂದು ಕೇಂದ್ರದ ಮುಖ್ಯಸ್ಥ ಡಾ.ಸಿ.ಎಂ.ರಫಿ ಹೇಳಿದರು.

‘ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ಪ್ರಗತಿಪರ ರೈತರ ಮೂಲಕ, ಸಾಂಪ್ರದಾಯಿಕ ಕೃಷಿಯಲ್ಲಿ ತೊಡಗಿರುವ ಕೃಷಿಕರಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವಂತೆ ರೈತರಿಗೆ ಉತ್ತೇಜನ ನೀಡಲಾಗುತ್ತದೆ. ರೈತರೇ ಅಭಿವೃದ್ಧಿಪಡಿಸಿರುವ ಕೃಷಿ ಉಪಕರಣಗಳನ್ನು ಪ್ರದರ್ಶಿಸಿ, ಪ್ರಚಾರ ನೀಡಿ ಅವರನ್ನು ಪ್ರೋತ್ಸಾಹಿಸಲಾಗುತ್ತಿದೆ’ ಎಂದರು.

ಕಾರ್ಯಾಗಾರದಲ್ಲಿ 10ಕ್ಕೂ ಹೆಚ್ಚು ಕೃಷಿ ತಜ್ಞರು, 40ಕ್ಕೂ ಹೆಚ್ಚು ರೈತ ಮಹಿಳೆಯರು ಭಾಗವಹಿಸಿದ್ದರು. ಸೈನಿಕ ಹುಳು ನಿರ್ವಹಣೆ ಜಾಗೃತಿ: ಕೃಷಿ ಇಲಾಖೆ, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಿಂದ ಶಿರಹಟ್ಟಿ ತಾಲ್ಲೂಕಿನ ರಣತೂರು ಗ್ರಾಮದಲ್ಲಿ ಗೋವಿನಜೋಳದಲ್ಲಿ ಕಾಣಿಸಿಕೊಂಡ ಸೈನಿಕ ಹುಳುವಿನ ಸಮಗ್ರ ಹತೋಟಿ ಕುರಿತ ಜಾಗೃತಿ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

‘ಸೈನಿಕ ಹುಳಿವಿನ ಹಾವಳಿಯಿಂದ ರೈತರು ಬೇಸತ್ತಿದ್ದಾರೆ. ಈ ಕೀಟದ ಹತೋಟಿಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಕೃಷಿ ಇಲಾಖೆಯ ಉಪ ನಿರ್ದೇಶಕ ಸಹದೇವ ಯರಗೊಪ್ಪ ಹೇಳಿದರು. ಸೋಲಾರ್ ಕೀಟ ಬಲೆಯ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ಸೈನಿಕ ಹುಳುವಿನ ಉಗಮ, ಬಾಧೆ, ಜೀವನ ಚಕ್ರ ಹಾಗೂ ನಿರ್ವಹಣಾ ಕ್ರಮಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲಾಯಿತು. ಎಫ್.ಎಸ್.ರಾಯನಗೌಡರ, ಚಂದ್ರಶೇಖರ ನರಸಮ್ಮನವರ್, ಕೃಷಿ ಅಧಿಕಾರಿ ಮೊಹಮ್ಮದ್ ಇರ್ಫಾನ್ ಇದ್ದರು. 80ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT