ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸೆಂಬರ್‌ಗೆ ಕುರುಬ ಸಮುದಾಯ ಭವನ ಉದ್ಘಾಟನೆ

Last Updated 7 ನವೆಂಬರ್ 2017, 8:36 IST
ಅಕ್ಷರ ಗಾತ್ರ

ಮುಳಬಾಗಿಲು: ‘ಜನರ ಸಮಸ್ಯೆಗಳ ಪರವಾಗಿ ಧ್ವನಿ ಎತ್ತಿ ಪರಿಹಾರ ಕಲ್ಪಿಸಿದವರ ಹೆಸರು ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತದೆ’ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಅಭಿಪ್ರಾಯಪಟ್ಟರು. ನಗರದಲ್ಲಿ ಸೋಮವಾರ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರ, ಹಣ, ಸಂಪತ್ತು ಇವೆಲ್ಲಾ ತಾತ್ಕಾಲಿಕ. ಅಧಿಕಾರ ಇರುವಾಗ ಸಮಾಜಮುಖಿಯಾಗಿ ಕೆಲಸ ಮಾಡಿ ಜನರ ಕಷ್ಟ ಪರಿಹರಿಸಬೇಕು ಎಂದು ಕರೆ ನೀಡಿದರು.

ಕುರುಬ ಸಮುದಾಯದವರು ರಾಜಕೀಯವಾಗಿ ಯಾವುದೇ ಪಕ್ಷದಲ್ಲಿದ್ದರೂ ಸರಿ. ಆದರೆ, ಸಮುದಾಯ ಹಬ್ಬ ಹಾಗೂ ಪೂಜಾ ಕಾರ್ಯ ಬಂದಾಗ ಎಲ್ಲರೂ ಒಗ್ಗೂಡಿ ತಮ್ಮ ಹಕ್ಕು ಪಡೆಯಲು ಮುಂದಾಗಬೇಕು. ನಗರದಲ್ಲಿ ನಿರ್ಮಾಣವಾಗುತ್ತಿರುವ ಕುರುಬ ಸಮುದಾಯ ಭವನದ ಕಾಮಗಾರಿ ಸದ್ಯದಲ್ಲೇ ಪೂರ್ಣಗೊಳ್ಳಲಿದ್ದು, ಡಿಸೆಂಬರ್‌ ವೇಳೆಗೆ ಭವನ ಉದ್ಘಾಟನೆಯಾಗುತ್ತದೆ ಎಂದು ಭರವಸೆ ನೀಡಿದರು.

ಕುರುಬ ಸಮುದಾಯದವರು ಕಾಡಿನಲ್ಲಿ ವಾಸಿಸುತ್ತಾ ಗಡ್ಡೆ ಗೆಣಸು ತಿಂದು ಜೀವನ ನಡೆಸುತ್ತಿದ್ದಾರೆ. ಸರ್ಕಾರ ಅಂತಹವರನ್ನು ಗುರುತಿಸಿ ಮೂಲಸೌಕರ್ಯ ಕಲ್ಪಿಸಿಕೊಟ್ಟು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಶಾಸಕ ವರ್ತೂರು ಪ್ರಕಾಶ್ ಹೇಳಿದರು.

ಕಾರ್ಯಕ್ರಮದ ನಂತರ ಕನಕದಾಸರ ಭಾವಚಿತ್ರಗಳ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಡೊಳ್ಳು ಕುಣಿತ, ವೀರಗಾಸೆ, ಗಾರುಡಿ ಗೊಂಬೆ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.

ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ವೆಂಕಟೇಶ್‌ಗೌಡ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಕಾಶ್‌ರಾಮಚಂದ್ರ, ಅರವಿಂದ್, ನಾಗಮಣಿ, ಮಾಜಿ ಉಪಾಧ್ಯಕ್ಷ ಕಿಟ್ಟಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಎಂ.ಹರೀಶ್, ಶ್ರೀನಾಥ್, ಎ.ವಿ.ಶ್ರೀನಿವಾಸ್, ಕೋಚಿಮುಲ್ ನಿರ್ದೇಶಕ ಆರ್.ಆರ್.ರಾಜೇಂದ್ರಗೌಡ, ತಹಶೀಲ್ದಾರ್‌ ಬಿ.ಎನ್‌.ಪ್ರವೀಣ್‌, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಗಂಗಿರೆಡ್ಡಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT