ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರತ್ಯೇಕ ಧರ್ಮ: ಸಚಿವ ಸಂಪುಟದಲ್ಲಿ ನಿರ್ಣಯಿಸಲಿ’

Last Updated 7 ನವೆಂಬರ್ 2017, 9:15 IST
ಅಕ್ಷರ ಗಾತ್ರ

ರಾಯಚೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿಯವರೆಗೂ ರಾಜ್ಯದ ಎಲ್ಲ ಜನರ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿಲ್ಲ. ಅವರು ಜಾತಿ, ಜಾತಿಗಳ ನಡುವೆ ಜಗಳಹಚ್ಚಿ ಧರ್ಮ ರಾಜಕಾರಣ ಮಾಡುತ್ತಿದ್ದಾರೆ. ತಾಕತ್ತಿದ್ದರೆ ಪ್ರತ್ಯೇಕ ಧರ್ಮದ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಿ’ ಎಂದು ಶಾಸಕ ಎ.ಎಸ್.ಪಾಟೀಲ್‌ ನಡಹಳ್ಳಿ ಸವಾಲು ಹಾಕಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲಿಂಗಾಯತ ಸಮಾಜವನ್ನು ಒಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ.ಪಾಟೀಲ್ ಹಾಗೂ ವಿನಯ ಕುಲಕರ್ಣಿ ಅವರ ಮೂಲಕ ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಸಚಿವರಿಗೆ ಹಣ ನೀಡಿದ್ದಾರೆ’ ಎಂದು ಆರೋಪಿಸಿದರು. ‘ಬೆಳಗಾವಿ ಅಧಿವೇಶನ ಪ್ರವಾಸದ ಕಾರ್ಯಕ್ರಮವಾಗಬಾರದು. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಬೇಕು.

ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷ ಉತ್ತರ ಕರ್ನಾಟಕದ ಅಭಿವೃದ್ಧಿಗೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಸಾಕಷ್ಟು ನಿದರ್ಶನಗಳಿವೆ. ಸರ್ಕಾರ ಉತ್ತರಿಸಬೇಕು’ ಎಂದು ಹೇಳಿದರು. ‘ಪರಿವರ್ತನಾ ರ‍್ಯಾಲಿ ಹಮ್ಮಿಕೊಂಡಿರುವ ಬಿಜೆಪಿ ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ಭರವಸೆ ನೀಡಬೇಕು. ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಜನರು ರೋಸಿ ಹೋಗಿದ್ದು, ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ ನೀಡಲು ಆಸಕ್ತಿ ತೋರಿದ್ದಾರೆ. ಹೀಗಾಗಿ ಎಚ್‌.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ’ ಎಂದು ಭವಿಷ್ಯ ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT