ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟ ಪಂಗಡ ಪ್ರಗತಿಗೆ ಪ್ರಸನ್ನಾನಂದ ಶ್ರೀಗಳ ಸಲಹೆ

Last Updated 8 ನವೆಂಬರ್ 2017, 5:47 IST
ಅಕ್ಷರ ಗಾತ್ರ

ಕುರುಗೋಡು: ‘ರಾಜ್ಯದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ 15 ಜನ ಶಾಸಕರು ಮತ್ತು ಇಬ್ಬರು ಸಂಸದರು ಇದ್ದಾರೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಮಾಜಕ್ಕೆ ದೊರೆಯಬೇಕಾದ ಮೀಸಲಾತಿಯ ಬಗ್ಗೆ ಒಂದು ಬಾರಿಯು ಧ್ವನಿ ಎತ್ತದಿರುವುದು ವಿಷಾದಕರ ಸಂಗತಿ’ ಎಂದು ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಬೇಸರ ವ್ಯಕ್ತಪಡಸಿಸಿದರು.

ಇಲ್ಲಿಗೆ ಸಮೀಪದ ಓರ್ವಾಯಿ ಗ್ರಾಮದಲ್ಲಿ ಮಂಗಳವಾರ ವಾಲ್ಮೀಕಿ ಜಯಂತಿ ಅಂಗವಾಗಿ ನಡೆದ ಧರ್ಮಸಭೆಯಲ್ಲಿ ಅವರು ಮಾತನಾಡಿದರು. ಮುಂಬರುವ ಚುನಾವಣೆಯಲ್ಲಿ ಹಣ ಮತ್ತು ಹೆಂಡಕ್ಕೆ ಬೆಲೆಕೊಡದೆ ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಮಹತ್ವ ನೀಡುವ ವ್ಯಕ್ತಿಗಳಿಗೆ ಮತ ನೀಡಬೇಕು ಎಂದು ಸಲಹೆ ನೀಡಿದರು.

ಸಂಘಟನೆಗಾಗಿ ಮಹಾನ್ ವ್ಯಕ್ತಿಗಳ ಜಯಂತಿ ಆಚರಣೆ ಅಗತ್ಯವಿದೆ. ಮಹಾನ್ ದಾರ್ಶನಿಕರ ಜಯಂತಿ ಕೇವಲ ಜಾತಿಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ ಎಂದರು.
ವಿ.ಎಸ್. ಶಿವಶಂಕರ್ ಮಾತನಾಡಿ, ವಾಲ್ಮೀಕಿ ಸಮಾಜಕ್ಕೆ ದೊರೆತ ಮೀಸಲಾತಿ ಬಳಸಿಕೊಂಡು ಆಯ್ಕೆಯಾಗಿರುವ ಜನಪ್ರತಿನಿಧಿಗಳು ಶಿಕ್ಷಣ ಮತ್ತು ಉದ್ಯೋಗದಲ್ಲಿ ವಾಲ್ಮೀಕಿ ಸಮಾಜಕ್ಕೆ ದೊರೆಯಬೇಕಾದ ಶೇ. 7.3 ಮೀಸಲಾತಿಗಾಗಿ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಒತ್ತಾಯಿಸಬೇಕು ಎಂದರು.

ಕಾರ್ಯಕ್ರಮಕ್ಕೂ ಮುನ್ನ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ಜರುಗಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮಹಿಳೆಯರು ಪೂರ್ಣಕುಂಭ ಮತ್ತು ಕಳಸಗಳೊಂದಿಗೆ ಭಾಗವಹಿಸಿದ್ದು ವಿಶೇಷವಾಗಿತ್ತು. ಸುತ್ತಲಿನ ಗ್ರಾಮದ ವಾಲ್ಮೀಕಿ ಸಮಾಜದ ಮುಖಂಡರು ಕಾರ್ಯಕ್ರ ಮದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT