ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುಗ್ರಾಮ: ವಿದ್ಯಾರ್ಥಿ ಕೊಲೆ ಪ್ರಕರಣಕ್ಕೆ ತಿರುವು, 11ನೇ ತರಗತಿಯ ವಿದ್ಯಾರ್ಥಿ ಬಂಧನ

Last Updated 8 ನವೆಂಬರ್ 2017, 6:38 IST
ಅಕ್ಷರ ಗಾತ್ರ

ಗುರುಗ್ರಾಮ: ನಗರದ ರಾಯನ್‌ ಇಂಟರ್‌ನ್ಯಾಷನಲ್‌ ಶಾಲೆಯ ಏಳು ವರ್ಷದ ಬಾಲಕ ಪ್ರದ್ಯುಮ್ನ ಠಾಕೂರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 11ನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

‘ಮಂಗಳವಾರ ರಾತ್ರಿ ಸಿಬಿಐ ಅಧಿಕಾರಿಗಳು ನನ್ನ ಮಗನನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ತಪ್ಪೊಪ್ಪಿಕೊಳ್ಳುವಂತೆ ಅವನ ಮೇಲೆ ಅಧಿಕಾರಿಗಳು ಒತ್ತಾಯಿಸಿದ್ದಾರೆ. ಘಟನೆ ಕುರಿತು ಶಾಲೆಯ ಶಿಕ್ಷಕರಿಗೆ ಮಾಹಿತಿ ನೀಡಿದ್ದನೇ ಹೊರತು ಅವನು ಯಾವುದೇ ಅಪರಾಧ ಕೃತ್ಯವೆಸಗಿಲ್ಲ’ ಎಂದು ಬಂಧಿತ ವಿದ್ಯಾರ್ಥಿಯ ತಂದೆ ತಿಳಿಸಿದ್ದಾರೆ.

ಸೆ .8ರಂದು ಎಂದಿನಂತೆ ಶಾಲೆಗೆ ತೆರಳಿದ್ದ ಪ್ರದ್ಯುಮ್ನ ಠಾಕೂರ್‌ ಮೃತದೇಹ ಶಾಲೆಯ ಶೌಚಾಲಯದಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದನ್ನು ಇತರ ವಿದ್ಯಾರ್ಥಿಗಳು ಶಾಲಾ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದರು.

ಪ್ರಕರಣವನ್ನು ಖಂಡಿಸಿ ವಿದ್ಯಾರ್ಥಿಯ ಪೋಷಕರು ಸೇರಿದಂತೆ ಸಾರ್ವಜನಿಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ್ದರು.

ವಿದ್ಯಾರ್ಥಿ ಕೊಲೆ ಪ್ರಕರಣದ ತನಿಖೆಯನ್ನು ಹರಿಯಾಣ ಸರ್ಕಾರ ವಿಶೇಷ ತನಿಖಾ ತಂಡಕ್ಕೆ(ಎಸ್‌ಐಟಿ) ವಹಿಸಿತ್ತು. ಆದರೆ, ಬಾಲಕನ ತಂದೆ ವರುಣ್ ಠಾಕೂರ್‌ ಮತ್ತು ಕುಟುಂಬ ಸದಸ್ಯರು ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಶಾಲೆಯ ಮಾಲಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶಾಲಾ ಬಸ್‌ ನಿರ್ವಾಹಕ ಅಶೋಕ್‌ರನ್ನೂ ಸಹ ಪೊಲೀಸರ ವಶಕ್ಕೆ ಪಡೆದಿದ್ದರು.

ಶಾಲೆಯ ಹಂಗಾಮಿ ಮುಖ್ಯೋಪಾಧ್ಯರಾದ ನೀರಜಾ ಬಾತ್ರಾ, ಹಿಂದಿನ ಮುಖ್ಯೋಪಾಧ್ಯಾಯ ರಾಖಿ ವರ್ಮಾ, ಬಸ್‌ ಚಾಲಕ ಸೌರಭ್‌ ರಾಘವ್‌, ನಿವಾರ್ಹಕ ಹರ್ಕೇಶ್‌ ಪ್ರಧಾನ್‌ ಹಾಗೂ ಇತರ ಎಂಟು ಕಾವಲುಗಾರರನ್ನು ಎಸ್‌ಐಟಿ ವಿಚಾರಣೆ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT