ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಕೆಗೆ ಬಿಜೆಪಿ ಪ್ರತಿಭಟನೆ

Last Updated 8 ನವೆಂಬರ್ 2017, 10:05 IST
ಅಕ್ಷರ ಗಾತ್ರ

ಇಂಡಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ ಬಿಜೆಪಿ ಕಾರ್ಯಕರ್ತರು, ಮಂಗಳವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿಠ್ಠಲ ಕಟಕದೊಂಡ, ಮಂಡಲ ಅಧ್ಯಕ್ಷ ಕಾಸುಗೌಡ ಬಿರಾದಾರ ನೇತೃತ್ವದಲ್ಲಿ ಪ್ರತಿಭಟಿಸಿದ ಕಾರ್ಯಕರ್ತರು, ಉಪ ವಿಭಾಗಾಧಿಕಾರಿ ಡಾ.ಪಿ.ರಾಜ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಜಾಥಾ ಬಸವೇಶ್ವರ ವೃತ್ತ, ದಾದಾಗೌಡ ಪಾಟೀಲ ವೃತ್ತ, ಡಾ,ಬಿ.ಆರ್.ಅಂಬೇಡ್ಕರ್ ವೃತ್ತ, ಮಹಾವೀರ ವೃತ್ತಗಳ ಮೂಲಕ ಕಂದಾಯ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿದ ಬಳಿಕ, ಪ್ರತಿಭಟನಾ ಸಭೆಯಾಗಿ ಪರಿವರ್ತಿತಗೊಂಡಿತು.

‘ರಸ್ತೆ ವಿಸ್ತರಿಸಿ ಅಭಿವೃದ್ಧಿ ಮಾಡುವಲ್ಲಿ ತಾರತಮ್ಯ ನೀತಿ ಅನುಸರಿ ಸಲಾಗಿದೆ. ಇದನ್ನು ಸರಿಪಡಿಸಬೇಕು. ಮೆಗಾ ಮಾರ್ಕೆಟ್ ನಿರ್ಮಿಸಿ, ಅಂಗಡಿ ಕಳೆದುಕೊಂಡವರಿಗೆ ಅಂಗಡಿ ನೀಡಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿದ್ದು, ದುರಸ್ತಿಗೊಳಿಸಬೇಕು.

ರೈತರ ಸಾಲ ಮನ್ನಾದ ಹಣವನ್ನು ಶೀಘ್ರವೇ ಬಿಡುಗಡೆ ಮಾಡಬೇಕು, ಪಶು ವೈದ್ಯಕೀಯ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಸರಿಪಡಿಸಬೇಕು, ಕಬ್ಬಿನ ದರ ಶೀಘ್ರವೇ ನಿಗದಿಪಡಿಸಬೇಕು’ ಎಂಬುದು ಸೇರಿದಂತೆ ಮತ್ತಿತರ ಬೇಡಿಕೆ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT