ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ

Last Updated 9 ನವೆಂಬರ್ 2017, 5:38 IST
ಅಕ್ಷರ ಗಾತ್ರ

ಚಾಮರಾಜನಗರ: ನ್ಯಾಯಾಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಬುಧವಾರ ನಗರದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಬೈಕ್‌ ರ‍್ಯಾಲಿ ನಡೆಸಲಾಯಿತು. ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದಿಂದ ರ‍್ಯಾಲಿ ಆರಂಭಿಸಿದ ಸಂಘಟನೆಯ ಕಾರ್ಯಕರ್ತರು ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರಿಗೆ ಮನವಿ ಸಲ್ಲಿಸಿದರು.

ಸಂವಿಧಾನದ ಆಶಯದಡಿ ಸರ್ವರಿಗೂ ಸಮಪಾಲು-, ಸರ್ವರಿಗೂ ಸಮಬಾಳು ನಿಯಮದಡಿ ಅಸ್ಪೃಶ್ಯ ಸಮುದಾಯದವರಿಗೆ ಮೀಸಲು ಸೌಲಭ್ಯಗಳು ದೊರೆತಿವೆ. ಆದರೆ, ಈ ಜಾತಿಗಳ ನಡುವೆ ಪೈಪೋಟಿ ಹೆಚ್ಚಾಗಿ ಕೆಲವು ಜಾತಿಗಳು ಸವಲತ್ತುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ದೋಚಿಕೊಂಡಿರುವುದರಿಂದ ಮಾದಿಗ ಸಮುದಾಯ ಹಿಂದುಳಿಯುವಂತಾಗಿದೆ ಎಂದು ದೂರಿದರು.

ರಾಜ್ಯದಲ್ಲಿ ಮಾದಿಗ ಸಮುದಾಯ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಎಲ್‌.ಜೆ. ಹಾವನೂರು ಆಯೋಗದ ವರದಿಯು ಮಾದಿಗರ ಜನಸಂಖ್ಯೆಯನ್ನು ಪರಿಶಿಷ್ಟ ಜಾತಿಗಳಲ್ಲಿ ಶೇ 57.28ರಷ್ಟು ನಮೂದಿಸಿದೆ. ನ್ಯಾ. ಸದಾಶಿವ ಅವರು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಅಂಕಿ ಅಂಶಗಳನ್ನು ಕಲೆಹಾಕಿ, ಯಾವ ಜಾತಿಗೆ ಎಷ್ಟು ಪ್ರಮಾಣದಲ್ಲಿ ಸೌಲಭ್ಯಗಳು ದೊರೆತಿವೆ ಎಂಬುದನ್ನು ಸವಿಸ್ತಾರವಾಗಿ ವರದಿಯಲ್ಲಿ ಸಲ್ಲಿಸಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂಬ ಆಶಯವನ್ನು ವರದಿ ಎತ್ತಿಹಿಡಿದಿದೆ ಎಂದರು.

ಈ ವರದಿಯನ್ನು ಸದನದಲ್ಲಿ ಮಂಡಿಸಿ ಅಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ರವಾನಿಸಲು ತ್ವರಿತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಬಸವನಪುರ ರಾಜಶೇಖರ್, ಸಂಘಟನಾ ಕಾರ್ಯದರ್ಶಿ ರಾಜು, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಮುಖಂಡರಾದ ಶಿವು, ರಾಚಪ್ಪ, ಸುಬ್ಬಣ್ಣ, ಕೆಸ್ತೂರು ಮರಪ್ಪ, ಕುಮಾರ, ನಾಗರಾಜು, ನವೀನ, ಪ್ರಸನ್ನ ಚಕ್ರವರ್ತಿ, ಪ್ರಸಾದ್, ಶಂಕರ್, ಶಾಂತರಾಜು, ರಾಜೇಶ್, ಬಾಲು, ಶಿವರಾಜ್, ಲೋಕೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT