ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಅರ್ಥವ್ಯವಸ್ಥೆ ಅಸ್ತವ್ಯಸ್ತ: ಆಕ್ರೋಶ

Last Updated 9 ನವೆಂಬರ್ 2017, 6:05 IST
ಅಕ್ಷರ ಗಾತ್ರ

ಜಗಳೂರು: ಕೇಂದ್ರ ಸರ್ಕಾರದ ನೋಟು ನಿಷೇಧದ ನಿರ್ಧಾರದಿಂದ ದೇಶದಲ್ಲಿ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸಬೇಕಾಗಿದೆ ಎಂದು ಶಾಸಕ ಎಚ್‌.ಪಿ. ರಾಜೇಶ್‌ ಆರೋಪಿಸಿದರು. ಕಾಂಗ್ರೆಸ್‌ ಪಕ್ಷದ ವತಿಯಿಂದ ಪಟ್ಟಣದಲ್ಲಿ ಬುಧವಾರ ಕಪ್ಪುದಿನ ಆಚರಣೆಯ ಹಿನ್ನೆಲೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ತಪ್ಪು ನೀತಿಯಿಂದ ದೇಶದಾದ್ಯಂತ ಜನರು ತಿಂಗಳುಗಟ್ಟಲೆ ಬ್ಯಾಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲಬೇಕಾಯಿತು. ಸಾಕಷ್ಟು ಜನ ಪ್ರಾಣ ತೆತ್ತಿದ್ದಾರೆ. ದೇಶದ ಒಟ್ಟಾರೆ ಆರ್ಥಿಕ ಸ್ಥಿತಿ ಹದಗೆಟ್ಟುಹೋಗಿದೆ ಎಂದು ಶಾಸಕರು ದೂರಿದರು.

ತಹಶೀಲ್ದಾರ್‌ ಶ್ರೀಧರಮೂರ್ತಿ ಅವರು ಮನವಿ ಸ್ವೀಕರಿಸಿದರು. ಕಾಂಗ್ರೆಸ್‌ ಮುಖಂಡರಾದ ವೈ. ದೇವೇಂದ್ರಪ್ಪ, ಕೆ.ಪಿ. ಪಾಲಯ್ಯ, ತಿಪ್ಪೇಸ್ವಾಮಿ ಗೌಡ, ಗಿರೀಶ್‌ ಒಡೆಯರ್‌, ಬಿಸ್ತುವಳ್ಳಿ ಬಾಬು, ದೇವರಾಜ್‌ ನೇತೃತ್ವವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT