ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಂತಿಯುತ ಆಚರಣೆಗೆ ಸಹಕರಿಸಿ

Last Updated 9 ನವೆಂಬರ್ 2017, 9:07 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ಕಾನೂನು ಸುವ್ಯವಸ್ಥೆಗೆ ಭಂಗ ತರದಂತೆ ಟಿಪ್ಪು ಜಯಂತಿ ಆಚರಣೆಗೆ ಸಹಕರಿಸುವಂತೆ ಸಿಪಿಐ ಎಚ್.ಎನ್.ಸಿದ್ದಯ್ಯ ಸಾರ್ವಜನಿಕರಿಗೆ ಮನವಿ ಮಾಡಿದರು.
ಪಟ್ಟಣದ ಸಿಪಿಐ ಕಚೇರಿಯಲ್ಲಿ ಬುಧವಾರ ನಡೆದ ಟಿಪ್ಪು ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಟಿಪ್ಪು ಜಯಂತಿ ಆಚರಣೆ ಸೂಕ್ಷ್ಮ ವಿಷಯವಾಗಿದೆ. ಇದರಿಂದ ಸರ್ಕಾರ ಕೆಲವು ಷರತ್ತು ವಿಧಿಸಿ ಜಯಂತಿ ಆಚರಿಸಲು ಅನುವು ಮಾಡಿಕೊಟ್ಟಿದೆ. ಮುಸ್ಲಿಮರು ಈ ಷರತ್ತು ಪಾಲಿಸಬೇಕು ಎಂದು ಕೋರಿದರು.

ಆಚರಣೆ ನೆಪದಲ್ಲಿ ಸಾರ್ವಜನಿಕ ಸ್ಥಫಳದಲ್ಲಿ ಫ್ಲೆಕ್ಸ್ ಅಳವಡಿಸುವುದು, ಮೆರವಣಿಗೆ ಹಾಗೂ ಸಭೆ ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಪಿಎಸ್ಐ ಎಸ್.ಎಸ್.ರವಿಕಿರಣ್, ಪುರಸಭೆ ಸದಸ್ಯ ಅಬ್ದುಲ್ ಅಜೀಜ್, ಅರ್ಷದ್, ತಾಲ್ಲೂಕು ಮುಸ್ಲಿಂ ಹಿತರಕ್ಷಣಾ ಸಮಿತಿ ಅಧ್ಯಕ್ಷ ರಹಮತ್ ಜಾನ್ ಬಾಬು, ಪೊಲೀಸ್ ಸಿಬ್ಬಂದಿಯಾದ ವಿ.ಜೆ.ಮಂಜುನಾಥ್, ಅನಂತ್, ನಯೀಮ್ ಅಹಮ್ಮದ್, ಹಬೀಬುಲ್ಲಾ, ರಾಧಾ, ಮುಸ್ಲಿಂ ಮುಖಂಡರು ಭಾಗವಹಿಸಿದ್ದರು. ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಪಥಸಂಚಲನ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT