ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಪಿಎಸ್‌ : ಉಪಾಹಾರದಲ್ಲಿ ಹುಳ ಪತ್ತೆ

Last Updated 9 ನವೆಂಬರ್ 2017, 9:21 IST
ಅಕ್ಷರ ಗಾತ್ರ

ಶಕ್ತಿನಗರ: ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್‌) ನೌಕರರಿಗೆ ಬುಧವಾರ ಕ್ಯಾಂಟೀನ್‌ನಿಂದ ವಿತರಿಸಿದ್ದ ಉಪಾಹಾರದಲ್ಲಿ ಹುಳಗಳು ಪತ್ತೆಯಾಗಿವೆ. ಸ್ಥಾವರದ ಯುಸಿಬಿ 3 ಮತ್ತ 4ನೇ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 15ಕ್ಕೂ ಹೆಚ್ಚು ಕಾರ್ಮಿಕರಿಗೆ ಉಪಾಹಾರ ವಿತರಣೆ ಮಾಡಲಾಗಿತ್ತು. ಹುಳ ಕಂಡು ಹೌಹಾರಿದ ನೌಕರರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕ್ಯಾಂಟೀನ್‌ ನಿರ್ವಹಣೆಗೆ ಟೆಂಡರ್ ಕರೆದು ಗುತ್ತಿಗೆ ನೀಡದೆ ಸ್ಥಳೀಯ ಏಜೆನ್ಸಿಯವರಿಗೆ ಕ್ಯಾಂಟೀನ್ ನಿರ್ವಹಣೆ ಮಾಡಲು ಅಧಿಕಾರಿಗಳು ನೀಡಿದ್ದು’ ಇದಕ್ಕೆ ಕಾರಣ ಎಂದು ನೌಕರರ ಆರೋಪಿಸಿದ್ದಾರೆ. ಶೀಘ್ರ ಕ್ಯಾಂಟೀನ್‌ನಲ್ಲಿನ ಅವ್ಯವಸ್ಥೆ ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಆರ್‌ಟಿಪಿಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ವೇಣುಗೋಪಾಲ ಮಾತನಾಡಿ, ‘ಸರಿಯಾಗಿ ನಿರ್ವಹಣೆ ಮಾಡಲು ಆಗುತ್ತಿಲ್ಲ ಎಂದು ಮಂಗಳೂರಿನ ಏಜೆನ್ಸಿಯವರು ಬಿಟ್ಟು ಹೋಗಿದ್ದಾರೆ. ನೌಕರರ ಉಪಾಹಾರಕ್ಕೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ತಾತ್ಕಾಲಿಕವಾಗಿ ಕ್ಯಾಂಟೀನ್ ನಿರ್ವಹಣೆಗೆ ಸ್ಥಳೀಯವರಿಗೆ ನೀಡಲಾಗಿದೆ. ಶೀಘ್ರ ಟೆಂಡರ್ ಕರೆದು ಗುತ್ತಿಗೆ ನೀಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT