ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಫಲ್ಯ ಮುಚ್ಚಿಕೊಳ್ಳಲು ತೆಗೆದುಕೊಂಡ ನಿರ್ಧಾರ

Last Updated 9 ನವೆಂಬರ್ 2017, 9:53 IST
ಅಕ್ಷರ ಗಾತ್ರ

ಉಡುಪಿ: ಕೇಂದ್ರದ ಬಿಜೆಪಿ ಸರ್ಕಾರ ತನ್ನ ಅಡಳಿತದ ವೈಫಲ್ಯ ಮುಚ್ಚಿಕೊಳ್ಳಲು ಹಾಗೂ ಜನರ ಗಮನ ಬೇರೆಡೆ ಸೆಳೆಯಲು ನೋಟು ರದ್ದು ಮಾಡಿತು. ಅದರ ಪರಿಣಾಮ ಇಡೀ ರಾಷ್ಟ್ರದ ಜನರು ಸಂಕಷ್ಟ ಎದುರಿಸುವಂತಾಯಿತು ಎಂದು ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ದೂರಿದರು.

ಕೇಂದ್ರ ಸರ್ಕಾರದ ನೋಟು ರದ್ದತಿ ಹಾಗೂ ಸರಕು ಮತ್ತು ಸೇವಾ ತೆರಿಗೆ ಜಾರಿಯನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಏರ್ಪಡಿಸಿದ್ದ ಕರಾಳ ದಿನಾಚರಣೆ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಇಂದು ಕೇವಲ ಕಾಂಗ್ರೆಸ್ ಮಾತ್ರ ಕರಾಳ ದಿನಾಚರಣೆ ಆಚರಿಸುತ್ತಿಲ್ಲ, ದೇಶದ ಮೂಲೆ ಮೂಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಹಾಗೂ ಜನರು ಸಹ ಕರಾಳ ದಿನವನ್ನಾಗಿ ಆಚರಿಸುತ್ತಿದ್ದಾರೆ.

ವಿದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಕಪ್ಪು ಹಣ ಇದೆ, ಅದನ್ನು ತಂದು ಪ್ರತಿಯೊಬ್ಬ ಭಾರತೀಯ ಖಾತೆಗೆ ₹15 ಲಕ್ಷ ಜಮಾ ಮಾಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಆಡಳಿತದಲ್ಲಿಯೂ ವಿಫಲವಾದ ಕಾರಣ ಭ್ರಷ್ಟಾಚಾರದ ವಿರುದ್ಧ ಹೋರಾಟ ಎಂದು ನೋಟು ರದ್ದು ಮಾಡಿದರು. ಇಡೀ ದೇಶದ ಜನರು ಅದರಿಂದ ತೊಂದರೆ ಅನುಭವಿಸಿದರು.

ಕೇವಲ 50 ದಿನ ಸಮಯ ಕೊಡಿ ಎಲ್ಲವನ್ನೂ ಸರಿ ಮಾಡಲಾಗುವುದು ಎಂದರು. ಆದರೆ 365 ದಿನ ಕಳೆದರೂ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ಸಾಧ್ಯವಾಗಿಲ್ಲ. ನೋಟು ರದ್ದಾದ ಪರಿಣಾಮ ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ ಶೇ2ರಷ್ಟು ಕಡಿಮೆಯಾಯಿತು. 7 ಕೋಟಿ ಉದ್ಯೋಗ ನಷ್ಟವಾಗಿದೆ. 2 ಕೋಟಿ ಜನರು ಇರುವ ಕೆಲಸವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ, ಮುಖಂಡರಾದ ಹರೀಶ್ ಕಿಣಿ, ಸತೀಶ್ ಅಮಿನ್ ಪಡುಕೆರೆ, ಉದ್ಯಾವರ ನಾಗೇಶ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT