ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಭಾ ನಾಯಕರಾಗಿ ಸಚಿವ ಸೀತಾರಾಂ

Last Updated 9 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು:  ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಂ.ಆರ್. ಸೀತಾರಾಂ ಅವರನ್ನು ವಿಧಾನಪರಿಷತ್ತಿನ ಸಭಾ ನಾಯಕರಾಗಿ ನೇಮಕ ಮಾಡಲಾಗಿದೆ.

ವಿಧಾನಪರಿಷತ್ತಿನ ಸದಸ್ಯರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಈ ಹಿಂದೆ ಸಭಾ ನಾಯಕರಾಗಿದ್ದರು. ಇದೇ ವರ್ಷದ ಜೂನ್ ತಿಂಗಳಿನಲ್ಲಿ ನಡೆದ ಅಧಿವೇಶನದ ಹೊತ್ತಿಗೆ ಗೃಹ ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದರು. ಅಧಿವೇಶನ ಮುಗಿಯುವವರೆಗೆ ಸಚಿವರಾಗಿ ಮುಂದುವರಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಮೇಶ್ವರ ಅವರಿಗೆ ಸೂಚಿಸಿದ್ದರು.

ಇದೇ 13ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಸರ್ಕಾರದ ಪರವಾಗಿ ವಿಧಾನಪರಿಷತ್ತಿನಲ್ಲಿ ಉತ್ತರ ಕೊಡಬೇಕಾದ ಜವಾಬ್ದಾರಿ ಸಭಾ ನಾಯಕರದ್ದಾಗಿದೆ. ಹೀಗಾಗಿ, ಸೀತಾರಾಂ ಅವರನ್ನು ಸಭಾನಾಯಕರಾಗಿ ಮುಖ್ಯಮಂತ್ರಿ ನೇಮಕ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಮೊದಲು ಎಸ್.ಆರ್‌. ಪಾಟೀಲ ಸಭಾ ನಾಯಕರಾಗಿದ್ದರು. ಸಂಪುಟ ಪುನರ್‌ ರಚನೆ ವೇಳೆ ಅವರು ಸಚಿವ ಸ್ಥಾನ ಕಳೆದುಕೊಂಡಿದ್ದರು. ಬಳಿಕ ಪರಮೇಶ್ವರ ಸಭಾನಾಯಕರಾಗಿದ್ದರು.

2012ರಲ್ಲಿ ಸೀತಾರಾಂ ಅವರನ್ನು ವಿಧಾನಪರಿಷತ್ತಿನ ಸದಸ್ಯರಾಗಿ ನಾಮ ನಿರ್ದೇಶನ ಮಾಡಲಾಗಿದೆ. 2016 ರ ಜೂನ್‌ನಲ್ಲಿ ಅವರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT