ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿ: ಶಾಸಕ ರಾಘವೇಂದ್ರ

Last Updated 10 ನವೆಂಬರ್ 2017, 10:03 IST
ಅಕ್ಷರ ಗಾತ್ರ

ಶಿಕಾರಿಪುರ: ರಾಜ್ಯ ಸರ್ಕಾರ ಶೀಘ್ರ ತಾಲ್ಲೂಕು ಕೇಂದ್ರದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು ಹಾಗೂ ಮೆಕ್ಕೆಜೋಳ, ಭತ್ತಕ್ಕೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಶಾಸಕ ಬಿ.ವೈ. ರಾಘವೇಂದ್ರ ಒತ್ತಾಯಿಸಿದರು.

ಸಮಯಕ್ಕೆ ಸರಿಯಾಗಿ ಮಳೆ ಬಾರದ ಕಾರಣ ತಾಲ್ಲೂಕಿನ ರೈತರು ಭತ್ತ ಬೆಳೆ ಬೆಳೆಯುವ ಬದಲು ಹೆಚ್ಚು ಮೆಕ್ಕೆಜೋಳ ಬೆಳೆದಿದ್ದಾರೆ. ತಾಲ್ಲೂಕಿನಲ್ಲಿ ಸುಮಾರು 25 ಸಾವಿರ ಎಕರೆಗೂ ಹೆಚ್ಚು ಕೃಷಿಭೂಮಿಯಲ್ಲಿ ರೈತರು ಮೆಕ್ಕೆಜೋಳ ಬೆಳೆದಿದ್ದಾರೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 1,425 ಕನಿಷ್ಠ ಬೆಲೆ ಘೋಷಣೆ ಮಾಡಿದೆ. ರಾಜ್ಯ ಸರ್ಕಾರ  ಮೆಕ್ಕೆಜೋಳಕ್ಕೆ ₹ 400 ಪ್ರೋತ್ಸಾಹ ಧನ ನೀಡಬೇಕು ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ರಾಜ್ಯದ ಎಪಿಎಂಸಿ ಮೂಲಕ ಸಂಗ್ರಹವಾಗಿರುವ ಕೋಟ್ಯಂತರ ರೂಪಾಯಿ ಆವರ್ತ ನಿಧಿಯನ್ನು ಸರ್ಕಾರ ಬಳಸಿಕೊಳ್ಳುವ ಮೂಲಕ ಮೆಕ್ಕೆಜೋಳಕ್ಕೆ ಪ್ರೋತ್ಸಾಹ ಧನ ನೀಡಬಹುದಾಗಿದೆ. ರೈತರು ತಾವು ಬೆಳೆದ ಮೆಕ್ಕೆಜೋಳವನ್ನು ಕಡಿಮೆ ಬೆಲೆಗೆ ಮಾರುವ ಬದಲು ರಾಜ್ಯ ಸರ್ಕಾರ ಪ್ರೋತ್ಸಾಹ ಧನ ಘೋಷಿಸುವವರೆಗೂ ಕಾಯಬೇಕು ಎಂದು ಸಲಹೆ ನೀಡಿದರು.

ಕಳೆದ ತಿಂಗಳ ಮಳೆಗೆ ತಾಲ್ಲೂಕಿನಲ್ಲಿ ಮೆಕ್ಕೆಜೋಳ ಹಾಗೂ ಅಡಿಕೆ ಬೆಳೆಗೆ ಹಾನಿಯಾಗಿದ್ದು, ರೈತರು ನಷ್ಟ ಅನುಭವಿಸಿದ್ದಾರೆ. ಹಾನಿಗೊಳದ ಈ ರೈತರಿಗೆ ಬೆಳೆ ಪರಿಹಾರ ಹಣವನ್ನು ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠೀಯಲ್ಲಿ ಮುಖಂಡರಾದ ಕೆ.ಎಸ್. ಗುರುಮೂರ್ತಿ, ಮಾರವಳ್ಳಿ ಚಂದ್ರೇಗೌಡ್ರು, ಎಂ.ಬಿ. ಚನ್ನವೀರಪ್ಪ, ಜೆ. ಸುಕೇಂದ್ರಪ್ಪ, ಟಿ.ಎಸ್‌. ಮೋಹನ್‌, ತೊಗರ್ಸಿ ಸಣ್ಣಹನುಮಂತಪ್ಪ, ಕಬಾಡಿ ರಾಜಪ್ಪ, ವಸಂತಗೌಡ, ಸತೀಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT