ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಕ್ಕೆ ಸೀಮಿತಗೊಳಿಸದಿರಿ

Last Updated 11 ನವೆಂಬರ್ 2017, 7:08 IST
ಅಕ್ಷರ ಗಾತ್ರ

ಮುಳಬಾಗಿಲು: ‘ಟಿಪ್ಪು ಸುಲ್ತಾನ್ ಯಾವುದೇ ನಿರ್ದಿಷ್ಟ ಜಾತಿ ಅಥವಾ ಧರ್ಮಕ್ಕೆ ಸೀಮಿತವಾಗಿರಲಿಲ್ಲ. ಅವರು ಜಾತ್ಯತೀತ ಹಾಗೂ ಧರ್ಮಾತೀತವಾಗಿ ಆಡಳಿತ ನಡೆಸಿದರು’ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಅಭಿಪ್ರಾಯಪಟ್ಟರು. ನಗರದಲ್ಲಿ ಶುಕ್ರವಾರ ಹಮ್ಮಿಕೊಳ್ಖಳಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದ ಹಾಗೂ ಜನರ ಹಿತ ಕಾಪಾಡಿದ ವ್ಯಕ್ತಿ ಟಿಪ್ಪು. ದೇಶದಲ್ಲಿ ಪ್ರತಿ ಜಾತಿಯವರು ಒಂದೊಂದು ಜಯಂತಿ ಆಚರಿಸುತ್ತಿದ್ದು, ಅದೇ ರೀತಿ ಮುಸ್ಲಿಮ್‌ ಸಮುದಾಯವರು ಟಿಪ್ಪು ಜಯಂತಿ ಆಚರಿಸುತ್ತಿದ್ದಾರೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ಎಂ.ಆರ್.ಮುರಳಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಸಿ.ನೀಲಕಂಠೇಗೌಡ, ಕೋಚಿಮುಲ್ ನಿರ್ದೇಶಕ ಆರ್.ಆರ್.ರಾಜೇಂದ್ರಗೌಡ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಶಿವಶಂಕರ್, ತಹಶೀಲ್ದಾರ್ ಸೋಮಶೇಖರ್, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಮುನಿರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪರಾಮ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT