ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾವಲಂಬಿ ಜೀವನ ನಡೆಸಿ

Last Updated 11 ನವೆಂಬರ್ 2017, 7:08 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ಸ್ತ್ರೀ ಶಕ್ತಿ ಸಂಘಗಳ ಸದಸ್ಯರು ಬಡ್ಡಿ ರಹಿತ ಸಾಲದ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಆರೋಗ್ಯ ಸಚಿವ ಕೆ.ಆರ್.ರಮೇಶ್‌ ಕುಮಾರ್‌ ಹೇಳಿದರು. ಪಟ್ಟಣದ ಮಷ್ಬೂರ್‌ ಮಾವಿನ ಕಾಯಿ ಮಂಡಿಯಲ್ಲಿ ಡಿಸಿಸಿ ಬ್ಯಾಂಕ್‌ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಸಾಲ ವಿತರಿಸಿ ಮಾತನಾಡಿದರು.

219 ಸಂಘಗಳಿಗೆ ₹ 10.75 ಕೋಟಿ ಸಾಲ ನೀಡಲಾಗಿದೆ. ಈ ಸಾಲದ ಹಣವನ್ನು ಉದ್ದೇಶಿತ ಅಭಿವೃದ್ಧಿ ಚಟುವಟಿಕೆಯಲ್ಲಿ ತೊಡಗಿಸಿ ಲಾಭ ಹೊಂದಬೇಕು. ಹಾಗೆಯೇ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಬೇಕು ಎಂದು ಹೇಳಿದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮಾತನಾಡಿ, ‘ಬಿದ್ದು ಹೋಗಿದ್ದ ಡಿಸಿಸಿ ಬ್ಯಾಂಕ್‌ ಪುನಶ್ಚೇತನಗೊಳ್ಳುವಲ್ಲಿ ಸಚಿವ ಕೆ.ಆರ್‌.ರಮೇಶ್ ಕುಮಾರ್‌ ಅವರ ಪಾತ್ರ ಹಿರಿದು. ಅವರಿಗೆ ಬಡವರ ಬಗ್ಗೆ ಇರುವ ಕಾಳಜಿ ಪರಿಣಾಮವಾಗಿ ಇಂದು ಸಾಲ ದೊರೆಯುತ್ತಿದೆ ಎಂದು ಹೇಳಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಯಕ್ಷ ಗೌಡ, ರಾಜ್ಯ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷ ಎಲ್‌.ಗೋಪಾಲಕೃಷ್ಣ, ಕೋಚಿಮುಲ್‌ ಅಧ್ಯಕ್ಷ ಎನ್‌.ಜಿ.ಬ್ಯಾಟಪ್ಪ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ದಿಂಬಾಲ ಅಶೋಕ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT