ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಗಿರಿ: ಬಿಜೆಪಿಯಿಂದ ಪಾದಯಾತ್ರೆ

Last Updated 11 ನವೆಂಬರ್ 2017, 7:11 IST
ಅಕ್ಷರ ಗಾತ್ರ

ಕನಕಗಿರಿ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ’ ಎಂದು ಮಾಜಿ ಶಾಸಕ ಜಿ. ವೀರಪ್ಪ ಕೇಸರಹಟ್ಟಿ ತಿಳಿಸಿದರು.
ಇಲ್ಲಿಗೆ ಸಮೀಪದ ನವಲಿ ತಾಂಡದಲ್ಲಿ ಶುಕ್ರವಾರ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಲ್ಲಿನ ಶಾಸಕ ಶಿವರಾಜ ತಂಗಡಗಿ ಅವರು ಕ್ಷೇತ್ರದ ಜನತೆಯ ನೋವು, ಸಮಸ್ಯೆ ಆಲಿಸುವಲ್ಲಿ ವಿಫಲರಾಗಿದ್ದಾರೆ ಎಂದರು.

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಸವರಾಜ ಧಡೇಸೂಗರು ಮಾತನಾಡಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರದಲ್ಲಿ ನವಲಿ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ ಎಂದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಬಸವರಾಜಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಲಪ್ಪ ಹೂಗಾರ, ಹಿಂದುಳಿದ ವರ್ಗದ ಮೋರ್ಚಾ ಅಧ್ಯಕ್ಷ ವಿರುಪಣ್ಣ ಕಲ್ಲೂರು, ಎಸ್‌ಟಿ ಮೋರ್ಚಾ ಕಾರ್ಯದರ್ಶಿ ನಾಗರಾಜ ಬಿಲ್ಗಾರ, ಎಪಿಎಂಸಿ ನಿರ್ದೇಶಕ ರಾಮ ಮೋಹನ ಮಾತನಾಡಿದರು.

ಗ್ರಾಮ ಪಂಚಾಯಿತಿ ಸದಸ್ಯ ಸಿದ್ರಾಮಗೌಡ ಉಪ್ಪಳ, ಪ್ರಮುಖರಾದ ಪಂಚಯ್ಯ ತಾತಾ ಬಿದ್ನೂರುಮಠ, ಮೋತಿಲಾಲ ನಾಯಕ್, ಭೀಮನಗೌಡ ಹರ್ಲಾಪುರ, ಪಾಂಡಪ್ಪ ನಾಯಕ್, ಪಿ. ಡಿ. ನಾಯಕ್ ಸೇರಿದಂತೆ ಮುಖಂಡರು ಇದ್ದರು.

ನವಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಜ್ಯೋತೆಮ್ಮ ಪಂಪಣ್ಣ, ದೇವಮ್ಮ ದುರಗಪ್ಪ ಸೇರಿ ಅನೇಕರು ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಜಿ.ವೀರಪ್ಪ ಕೇಸರ ಹಟ್ಟಿ ಅವರ ಮುಖಂಡತ್ವದಲ್ಲಿ ಪಾದಯಾತ್ರೆ ಯನ್ನು ಹಮ್ಮಿಕೊಳ್ಳಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT