ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾನೂನು ಕೈಗೆ ತೆಗೆದುಕೊಂಡರೆ ಕ್ರಮ’

Last Updated 11 ನವೆಂಬರ್ 2017, 7:14 IST
ಅಕ್ಷರ ಗಾತ್ರ

ಕೊಪ್ಪಳ: ಟಿಪ್ಪು ಜಯಂತಿ ಸಂದರ್ಭ ಯಾರೇ ಕಾನೂನು ಕೈಗೆ ತೆಗೆದುಕೊಂಡರೂ ಕಠಿಣ ಕ್ರಮ ಅನಿವಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಾಲ್ಲುಕಿನ ಬಸಾಪುರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಡಿಕೇರಿಯಲ್ಲಿ ಶಾಸಕ ಅಪ್ಪಚ್ಚು ರಂಜನ್‌ ಅವರನ್ನು ಬಂಧಿಸಿದ ಕುರಿತು ಪ್ರತಿಕ್ರಿಯಿಸಿದರು.

ಗಂಗಾವತಿಯಲ್ಲಿ ಶಾಸಕ ಇಕ್ಬಾಲ್‌ ಅನ್ಸಾರಿ ಅವರು ಎಚ್‌.ಆರ್‌.ಶ್ರೀನಾಥ್‌ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಯಾರೇ ಆದರೂ ಅಸಂಸ್ಕೃತ ಪದ ಬಳಸಬಾರದು. ಅವರು ಯಾಕೆ ಆ ರೀತಿ ಹೇಳಿದ್ದಾರೆ ಎಂದು ಗೊತ್ತಿಲ್ಲ.

ಈ ಬಗ್ಗೆ ಅವರ ಜತೆ ಮಾತನಾಡುತ್ತೇನೆ. ಇಷ್ಟಕ್ಕೂ ಅನ್ಸಾರಿ ಇನ್ನೂ ಕಾಂಗ್ರೆಸ್‌ ಸೇರ್ಪಡೆ ಆಗಿಲ್ಲ. ಸೇರ್ಪಡೆ ಬಳಿಕವಷ್ಟೇ ಅವರು ಕಾಂಗ್ರೆಸಿಗರು ಎಂದರು. ರಾಜ್ಯದಲ್ಲಿ ಸರಿಯಾಗಿ ಮರಳು ಸಿಗುತ್ತಿರಲಿಲ್ಲ. ಅದಕ್ಕಾಗಿ ಮರಳು ನೀತಿಗೆ ಸ್ವಲ್ಪ ತಿದ್ದುಪಡಿ ಮಾಡಬೇಕಾಯಿತು ಎಂದರು. ಸಚಿವ ಡಿ.ಕೆ.ಶಿವಕುಮಾರ್‌ ಎಂದಿಗೂ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT