ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಗೆ ಮೊದಲೇ ಉಡುಗೊರೆ

Last Updated 11 ನವೆಂಬರ್ 2017, 8:41 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ವಿಧಾನಸಭಾ ಚುನಾವಣೆ ಘೋಷಣೆಗೆ ಮುನ್ನವೇ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಟಿಕೆಟ್‌ ಆಕಾಂಕ್ಷಿಗಳು ಚಟುವಟಿಕೆ ಚುರುಕುಗೊಳಿಸಿದ್ದು, ಉಡುಗೊರೆ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ.

ಸತತ ಮೂರು ಬಾರಿ ಗೆಲುವು ಸಾಧಿಸಿ ಮತ್ತೆ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿ ರುವ ಶಾಸಕ ಕೆ.ವೆಂಕಟೇಶ್ ಅವರು ‘ಕೊಡುಗೆ’ಯಲ್ಲಿ ಮುಂದಿದ್ದಾರೆ. ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿದ್ದ 2,000 ಶಿಕ್ಷಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರಿಗೆ ಕೈಗಡಿಯಾರ ಉಡುಗೊರೆ ನೀಡಿದ್ದರು.

ಶಾಸಕರು ನ. 16ರಂದು ತಿರುಪತಿಯಿಂದ ಉತ್ಸವ ಮೂರ್ತಿ ತರಿಸಿ ತಾಲ್ಲೂಕು ಕ್ರೀಡಾಂಗಣದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸುಮಾರು 10,000 ಜನರಿಗೆ ಊಟದ ವ್ಯವಸ್ಥೆ ಮಾಡಲು ಮುಂದಾಗಿದ್ದಾರೆ. ನಾಲ್ಕೂವರೆ ವರ್ಷಗಳಿಂದ ಕೋಟ್ಯಂತರ ರೂಪಾಯಿ ಅನುದಾನ ತಂದು ತಾಲ್ಲೂಕಿನ ಅಭಿವೃದ್ಧಿಯಲ್ಲಿ ತೊಡಗಿ ದ್ದಾರೆ’ ಎಂದು ಶಾಸಕರ ಬೆಂಬಲಿಗರು ಸಮರ್ಥಿಸಿಕೊಳ್ಳುತ್ತಾರೆ.

ನೆರವು: ಹಿಂದಿನ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಕಡಿಮೆ ಅಂತರದಿಂದ ಸೋಲುಕಂಡಿರುವ ಜೆಡಿಎಸ್‌ನ ಕೆ.ಮಹದೇವ್‌ ಮತ್ತೊಮ್ಮೆ ಅದೃಷ್ಟ ಪರೀಕ್ಷಿಸಲು ಸಜ್ಜಾಗುತ್ತಿದ್ದಾರೆ. ಕ್ರೀಡಾಕೂಟ ಆಯೋಜನೆ, ಮದುವೆ ಸಮಾರಂಭ ಗಳಿಗೆ ಸಹಾಯ ಮಾಡುತ್ತಿದ್ದಾರೆ. ಪಕ್ಷದ ವರಿಷ್ಠರಾದ ಎಚ್‌.ಡಿ.ದೇವೇಗೌಡ, ಎಚ್.ಡಿ.ಕುಮಾರ ಸ್ವಾಮಿ ಬಹಿರಂಗ ಸಭೆಯಲ್ಲಿ ಮಹದೇವ್ ಅವರನ್ನು ಪಕ್ಷದ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.

ಗೊಂದಲದಲ್ಲಿ ಕಾರ್ಯಕರ್ತರು: ಕ್ಷೇತ್ರದಲ್ಲಿ ಈಚೆಗೆ ನಡೆದಿರುವ ವಿದ್ಯ ಮಾನಗಳಿಂದ ಬಿಜೆಪಿ ಕಾರ್ಯಕರ್ತರು ಗೊಂದಲಕ್ಕೆ ಸಿಲುಕಿದ್ದಾರೆ. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿಸಿಕೊಂಡಿದ್ದ ಸಿ.ಎಚ್‌.ವಿಜಯಶಂಕರ್‌ ಅವರು ಪಕ್ಷ ತೊರೆದಿರುವುದು ಇದಕ್ಕೆ ಕಾರಣ.

ಸಮಾಜ ಸೇವಕ ಮತ್ತು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಎಸ್‌.ಮಂಜುನಾಥ್ ಅವರಿಗೆ ಪಕ್ಷದ ಟಿಕೆಟ್‌ ಸಿಗುವ ಸಾಧ್ಯತೆಗಳಿವೆ. ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಸಮಾಜ ಸೇವೆ ಹೆಸರಿನಲ್ಲಿ ತಾಲ್ಲೂಕಿನಲ್ಲಿ ಕನಕ ಸಮುದಾಯ ಭವನ, ದೇವಾಲಯ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುತ್ತಿದ್ದಾರೆ. ಅವರಿನ್ನೂ ಅಧಿಕೃತವಾಗಿ ಪಕ್ಷದ ಕಚೇರಿಗೆ ಭೇಟಿ ನೀಡಿಲ್ಲ.

ತಾಲ್ಲೂಕಿನಲ್ಲಿ 10,000 ಜನರನ್ನು ಸೇರಿಸಿ ಸಮಾವೇಶ ಮಾಡಿ ಶಕ್ತಿ ಪ್ರದರ್ಶಿಸುವಂತೆ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನುತ್ತಾರೆ ಮಂಜುನಾಥ್ ಆಪ್ತರು. ಬಿಜೆಪಿಯಿಂದ ಸತತ ಎರಡು ಬಾರಿ ಸ್ಪರ್ಧಿಸಿ ಪರಾಭವಗೊಂಡಿದ್ದ ಎಚ್‌.ಡಿ.ಗಣೇಶ್ ಕೂಡ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ತಾಲ್ಲೂಕಿನಲ್ಲಿ ಈಚೆಗೆ ನಡೆದ ವಿದ್ಯಮಾನಗಳಿಂದ ನೊಂದಿರುವ ಅವರು ರಾಜಕೀಯ ಚಟುವಟಿಕೆಗಳಿಂದ ದೂರ ಸರಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT