ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಪಿಎಸ್‌: 3ನೇ ಘಟಕದಲ್ಲಿ ರಾಸಾಯನಿಕ ಸೋರಿಕೆ

Last Updated 11 ನವೆಂಬರ್ 2017, 8:52 IST
ಅಕ್ಷರ ಗಾತ್ರ

ಶಕ್ತಿನಗರ: ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ(ಆರ್‌ಟಿಪಿಎಸ್) 3ನೇ ಘಟಕದ ಸೇಫ್ಟಿ ವಾಲ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದ ಗುರುವಾರ ರಾಸಾಯನಿಕ ಸೋರಿಕೆ ಆಗಿದೆ. ರಾಸಾಯನಿಕ ನಾಲೆಗಳಲ್ಲಿ ಹರಿಯುತ್ತಿರುವುದನ್ನು ನೋಡಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತಕ್ಷಣವೇ ಸ್ಥಾವರದ ಒಳಗಡೆ ನಾಲೆಗಳಲ್ಲಿ ಹರಿಯುತ್ತಿರುವ ಅನಿಲವನ್ನು ಸ್ವಚ್ಛಗೊಳಿಸುವಂತೆ ಸೂಚಿಸಿದರು.

ರಾಸಾಯನಿಕ ಮಿಶ್ರಿತ ನೀರು ನದಿಯಲ್ಲಿ ಸೇರುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಇಡೀ ರಾತ್ರಿ ಕಾರ್ಮಿಕರು ಸ್ವಚ್ಛಗೊಳಿಸಿದರು. ಆರ್‌ಟಿಪಿಎಸ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ವೇಣುಗೋಪಾಲ ಮಾತನಾಡಿ, ‘210 ಮೆಗಾವಾಟ್ ಸಾಮರ್ಥ್ಯದ 3ನೇ ವಿದ್ಯುತ್‌ ಘಟಕದ ಸೇಫ್ಟಿ ವಾಲ್‌ನಲ್ಲಿ ಒತ್ತಡ ಹೆಚ್ಚಾಗಿ ರಾಸಾಯನಿಕ ಸೋರಿಕೆ ಆಗಿದೆ. ದುರಸ್ತಿ ಕಾರ್ಯ ಕೈಗೊಂಡು ಸೋರಿಕೆ ತಡೆಯಲಾಗಿದೆ’ ಎಂದು ಹೇಳಿದರು. ಈಚೆಗೆ 5ನೇ ಘಟಕದಲ್ಲಿ ಅನಿಲ ಸೋರಿಕೆ ಆಗಿ ನೀರು ನದಿಯಲ್ಲಿ ಸಂಗ್ರಹ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT