ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇತಿಹಾಸ ಪುರುಷರನ್ನು ನಿರಂತರ ಸ್ಮರಿಸಿ

Last Updated 13 ನವೆಂಬರ್ 2017, 5:33 IST
ಅಕ್ಷರ ಗಾತ್ರ

ದೇವನಹಳ್ಳಿ: ಈ ನೆಲದಲ್ಲಿ ಹುಟ್ಟಿದ ಇತಿಹಾಸಕಾರರ ಸ್ಮರಣೆಗಳು ನಿರಂತರವಾಗಬೇಕು ಎಂದು ಮಾನವ ಹಕ್ಕುಗಳ ಪ್ರಚಾರ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ.ಮಹೇಂದ್ರ ಕುಮಾರ್‌ ತಿಳಿಸಿದರು. ಇಲ್ಲಿನ ಟಿಪ್ಪು ಸುಲ್ತಾನ್‌ ವೃತ್ತದಲ್ಲಿ ಜಯಂತಿ ಅಂಗವಾಗಿ ಟಿಪ್ಪು ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಟಿಪ್ಪು ಸುಲ್ತಾನ್‌ ಮಹಾನ್‌ ಮೇಧಾವಿ ಮತ್ತು ಚತುರ ಆಡಳಿತಗಾರ. ತನ್ನ ಆಡಳಿತಾವಧಿಯಲ್ಲಿ ಅನೇಕ ಕೆರೆ ಕಟ್ಟೆ ನಿರ್ಮಾಣ ಮಾಡಿ ದೇವಾಲಯ, ಮಸೀದಿ, ಚರ್ಚ್‌ ನಿರ್ಮಾಣ ಮಾಡಿ ಸರ್ವ ಧರ್ಮೀಯರಿಗೆ ಸಮಾನ ಅವಕಾಶ ನೀಡಿದ್ದ ಎಂಬುದನ್ನು ಇತಿಹಾಸದಿಂದ ತಿಳಿದುಕೊಳ್ಳಬಹುದು. ಗತಿಸಿಹೋದ ಘಟನೆಗಳ ಬಗ್ಗೆ ಕೆಲವರು ಕೆಸರೆರಚಾಟದಲ್ಲಿ ತೊಡಗಿಸಿಕೊಂಡಿರುವುದು ದುರಂತ ಎಂದರು.

ಮಾನವ ಹಕ್ಕುಗಳ ಪ್ರಚಾರ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ರಾಜ್‌ ಗೋಪಾಲ್‌, ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಫಯಾಜ್‌ ಪಾಷ, ಯುವ ಘಟಕ ಅಧ್ಯಕ್ಷ ಮಹಮದ್‌ ಹಾರೀಸ್‌, ರಾಜ್ಯ ಘಟಕದ ಅಧ್ಯಕ್ಷ ಸರ್ಕಾರ್‌, ತಾಲ್ಲೂಕು ಘಟಕ ಕಾರ್ಯಾಧ್ಯಕ್ಷ ರಾಮಕೃಷ್ಣ, ವಿಜಯಪುರ ನಗರ ಘಟಕದ ಅಧ್ಯಕ್ಷ ಸುಬ್ಬಣ್ಣ, ದೇವನಹಳ್ಳಿ ನಗರ ಎಸ್ಸಿ ಮತ್ತು ಎಸ್ಟಿ ಘಟಕದ ಅಧ್ಯಕ್ಷ ಲಕ್ಷ್ಮಣ್‌, ಸಂಘಟನಾ ಕಾರ್ಯದರ್ಶಿ ಜಿ.ವಿ.ತಿಮ್ಮರಾಜು, ಆವತಿ ಗ್ರಾಮ ಘಟಕದ ಅಧ್ಯಕ್ಷ ರವಿಕುಮಾರ್, ವಿಧ್ಯಾರ್ಥಿ ಘಟಕದ ಅಧ್ಯಕ್ಷ ಉಯೋಜ್‌ ಪಾಷಾ, ತಾಲ್ಲೂಕು ಘಟಕ ಉಪಾಧ್ಯಕ್ಷ ಅಬ್ದುಲ್‌ ನವೀಜ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT