ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ

Last Updated 13 ನವೆಂಬರ್ 2017, 6:37 IST
ಅಕ್ಷರ ಗಾತ್ರ

ದಾವಣಗೆರೆ: ತಾಲ್ಲೂಕಿನ ದೊಡ್ಡಬಾತಿ ಗ್ರಾಮದಲ್ಲಿ ₹ 40 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ ಹೇಳಿದರು. ಇಲ್ಲಿನ ದೊಡ್ಡಬಾತಿ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಂಗನವಾಡಿ ಕಟ್ಟಡದ ಉದ್ಘಾಟನೆ, ವ್ಯಾಯಾಮ ಶಾಲೆಯ ಶಂಕುಸ್ಥಾಪನೆ, ಬಸ್‌ನಿಲ್ದಾಣ ಕಾಮಗಾರಿಯ ಶಂಕು ಸ್ಥಾಪನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಕಳೆದ ನಾಲ್ಕೂವರೆ ವರ್ಷಗಳಲ್ಲಿ ನಗರ ಪ್ರದೇಶ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿಯೂ ಸಿಮೆಂಟ್‌ ರಸ್ತೆಗಳ ನಿರ್ಮಾಣ ಹಾಗೂ ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ದೊಡ್ಡಬಾತಿ ಗ್ರಾಮದಲ್ಲಿಯೇ ₹ 4 ಕೋಟಿ ವೆಚ್ಚದಲ್ಲಿ ಯುಜಿಡಿ ಕಾಮಗಾರಿ ಕೈಗೊಳ್ಳಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೂ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ನಗರ ಒಳಗೊಂಡಂತೆ ಅಗತ್ಯವಿರುವೆಡೆ ಒಟ್ಟು 5 ಯಾತ್ರಿ ನಿವಾಸಗಳನ್ನು ನಿರ್ಮಿಸಲಾಗುವುದು. ದೊಡ್ಡಬಾತಿ ಗ್ರಾಮದಲ್ಲಿ ₹ 50 ಲಕ್ಷ ವೆಚ್ಚದಲ್ಲಿ ಕಲ್ಯಾಣ ಮಂಟಪ ನಿರ್ಮಿಸಲಾಗುವುದು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವರ ಬಳಿ ಚರ್ಚೆ ನಡೆಸಲಾಗುವುದು. ಗ್ರಾಮದಲ್ಲಿ 70 ಕಿಮೀ., ವ್ಯಾಪ್ತಿಯಲ್ಲಿ ಸಿಮೆಂಟ್‌ ರಸ್ತೆಗಳ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದರು.

₹ 6 ಕೋಟಿ ವೆಚ್ಚದಲ್ಲಿ ಬಾತಿ ಕೆರೆ ಅಭಿವೃದ್ಧಿ ಮಾಡಿ, ಪ್ರವಾಸಿತಾಣವನ್ನಾಗಿ ಮಾಡಲಾಗುವುದು. ಬೇಸಿಗೆ ವೇಳೆಯಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದರು.
ದೊಡ್ಡಬಾತಿ ಬೆಟ್ಟದ ಬಳಿಯ 26 ಎಕರೆ ಪ್ರದೇಶದಲ್ಲಿ ವಾಸವಾಗಿರುವ ಕುಟುಂಬಗಳನ್ನು ಸರ್ವೆ ಮಾಡಿ. ಶೀಘ್ರದಲ್ಲಿಯೇ ಅರ್ಹರಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರವು ಎಲ್ಲ ಸಮುದಾಯಗಳ ಪ್ರಗತಿಗಾಗಿ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ. ಮುಂಬರುವ ಚುನಾವಣೆಯಲ್ಲಿಯೂ ಕಾಂಗ್ರೆಸ್‌ಗೆ ಮತ್ತೊಮ್ಮೆ ಎಲ್ಲರೂ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು. ಇದೇ ವೇಳೆ 58 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಯಿತು. ಸಚಿವರು, ತೇರು ಬೀದಿ ಸಿಮೆಂಟ್‌ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಗೀತಾ ಗಂಗಾನಾಯ್ಕ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಉಪಾಧ್ಯಕ್ಷ ಬಿ.ಜಿ.ಸಂಗಜ್ಜಗೌಡ್ರು, ಎಪಿಎಂಸಿ ಅಧ್ಯಕ್ಷ ಮುದೇಗೌಡ್ರು ಗಿರೀಶ್‌, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಎಚ್‌.ಆರ್‌.ನಾಗರತ್ನಮ್ಮ ಮಂಜುನಾಥ, ರೇಣುಕಮ್ಮ ಕರಿಬಸಪ್ಪ, ಮಮತಾ ಕೆ.ಜಿ.ಉಮೇಶ್‌, ಕೆ.ಜಿ.ಶಾಂತರಾಜ್‌, ಬಿ.ಸುರೇಶ್‌, ತಹಶೀಲ್ದಾರ್ ಜಿ.ಸಂತೋಷ್‌ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್‌.ವಿಜಯಕುಮಾರ್ ಅವರೂ ಉಪಸ್ಥಿತರಿದ್ದರು.
ಗ್ರಾಮ ಪಂಚಾಯ್ತಿ ಅಧಿಕಾರಿ ಟಿ.ಎಸ್‌.ಕೆಂಚಪ್ಪ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT