ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮ್ಮೇಳನ: ವಿವಿಧೆಡೆ ‘ಕನ್ನಡ ರಥ’ ಸಂಚಾರ

Last Updated 13 ನವೆಂಬರ್ 2017, 8:36 IST
ಅಕ್ಷರ ಗಾತ್ರ

ಬನ್ನೂರು: ಯಾಚೇನಹಳ್ಳಿ ಗ್ರಾಮ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕನ್ನಡ ಸಾಹಿತ್ಯ ಪರಿಷತ್ ಸದಸ್ಯರನ್ನು ಹೊಂದಿರುವ ಗ್ರಾಮವಾಗಿದ್ದು, ಅಧ್ಯಕ್ಷ ವೈ.ಡಿ.ರಾಜಣ್ಣ ಕೂಡ ಇಲ್ಲಿನವರು ಎಂದು ವಿಶ್ವಪ್ರಜ್ಞಾ ಸಮೂಹ ಸಂಸ್ಥೆ ಅಧ್ಯಕ್ಷ ವೈ.ಎನ್.ಶಂಕರೇಗೌಡ ತಿಳಿಸಿದರು. ಯಾಚೇನಹಳ್ಳಿ ಗ್ರಾಮಕ್ಕೆ ಆಗಮಿಸಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ರಥಕ್ಕೆ ಸ್ವಾಗತ ಕೋರಿ ಅವರು ಮಾತನಾಡಿದರು.

ಈ ಭಾರಿ ಸಾಹಿತ್ಯ ಸಮ್ಮೇಳನ ಜಿಲ್ಲೆಯಲ್ಲಿಯೇ ಜರುಗುತ್ತಿರುವುದು ಹೆಮ್ಮೆಯ ವಿಷಯ. ಕನ್ನಡಾಂಬೆಯ ಸೇವೆ ಮಾಡುವ ಭಾಗ್ಯ ನಮಗೆ ದೊರೆತಿರುವುದು ಸಂತಸ ತಂದಿದೆ. ರಾಜ್ಯದಲ್ಲಿ ಕನ್ನಡಿಗರೇ ಸಾರ್ವಭೌಮರು. ಅನ್ಯರ ದಬ್ಬಾಳಿಕೆ ಸಹಿಸುವುದಿಲ್ಲ. ನಾಡು, ನುಡಿ, ಸಂಸ್ಕೃತಿಗೆ ಧಕ್ಕೆ ಉಂಟಾದರೆ ಎಂದೂ ಸಹಿಸುವುದಿಲ್ಲ ಎಂದು ತಿಳಿಸಿದರು.

ರಾಮಕೃಷ್ಣ ಸೇವಾ ಕೇಂದ್ರದ ನಾದಾನಂದನಾಥ ಸ್ವಾಮೀಜಿ ಮಾತನಾಡಿ, ಸಾರ್ವಜನಿಕರು ಸಮ್ಮೇಳನದಲ್ಲಿ ಭಾಗವಹಿಸಿ ಅಲ್ಲಿನ ವಿಚಾರಧಾರೆ ಅರಿಯಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜು, ವೈ.ಡಿ.ಶಿವಕುಮಾರ್, ಯಾಚೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕ್ಯಾತೇಗೌಡ, ನನ್ನವ್ವ ಕಲಾ ತಂಡದ ವೈ.ಜಿ.ಮಹದೇವ್, ಜಿ.ಬೊಮ್ಮನಹಳ್ಳಿ ವಿಜಯ್‌ಕುಮಾರ್, ಎಸ್.ಹೇಮಂತ್ ಕುಮಾರ್, ವೈ.ಎಲ್.ಮುದ್ದೇಗೌಡ, ವೈ.ಕೆ.ಬೋರೇಗೌಡ, ವೈ.ಸಿ.ದೇವನಾಥ್, ಪರಿಷತ್ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT