ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಡ: ಶಾಸಕರಿಗೆ ಮನವಿ

Last Updated 13 ನವೆಂಬರ್ 2017, 9:28 IST
ಅಕ್ಷರ ಗಾತ್ರ

ಮಸ್ಕಿ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಒತ್ತಾಯಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು ಭಾನುವಾರ ಇಲ್ಲಿ ಶಾಸಕ ಪ್ರತಾಪಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಮಾದಿಗ ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ಸರ್ಕಾರ ವಿಫಲವಾಗಿದೆ ಎಂದು ಮುಖಂಡ ಸುರೇಶ ಅಂತರಗಂಗಿ ಆರೋಪಿಸಿದರು.ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ದುರಗಪ್ಪ ಗುಡಗಲದಿನ್ನಿ, ಮಲ್ಲಯ್ಯ ಬಳ್ಳಾ, ಬಸ್ಸಪ್ಪ ಜಂಗಮರಹಳ್ಳಿ, ದ್ಯಾಮಣ್ಣ ಸಂತೆಕೆಲ್ಲೂರು, ಅಮರೇಶ ಮಲ್ಕಾಪುರ, ಹುಲಗಪ್ಪ ಬೆಲ್ಲದರಮರಡಿ, ಪಂಪಾಪತಿ ವಕೀಲ, ಹುಲಗಪ್ಪ ಯಕ್ಲಾಸಪುರ, ಸುಭಾಷ ಮುದಬಾಳ, ಬಸವರಾಜ ಕೆಳಗೇರಿ, ಸಿದ್ದು ಮುರಾರಿ, ದುರ್ಗರಾಜ ವಟಗಕ್‌ ಶಿವರಾಜ ಪೂಜಾರಿ, ವಸಂತಿ ಕತ್ತಿ, ಮಂಜುನಾಥ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT