ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆಯ ಗುಂಡಿಗಳನ್ನು ಮುಚ್ಚಿದ ವಕೀಲರು

Last Updated 13 ನವೆಂಬರ್ 2017, 9:56 IST
ಅಕ್ಷರ ಗಾತ್ರ

ಶಿಡ್ಲಘಟ್ಟ : ‘ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಬೇಸತ್ತು ನಾವೇ ಸ್ವತಃ ಗುಂಡಿಗಳನ್ನು ಮುಚ್ಚುವ ಕೆಲಸಕ್ಕೆ ಮುಂದಾಗಿದ್ದೇವೆ’ಎಂದು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರಗೌಡ ಹೇಳಿದರು.

ತಾಲ್ಲೂಕು ವಕೀಲರ ಸಂಘದ ವತಿಯಿಂದ ನಗರದ ದಿಬ್ಬೂರಹಳ್ಳಿ ರಸ್ತೆಯಲ್ಲಿರುವ ನ್ಯಾಯಾಲಯಕ್ಕೆ ಹೋಗುವ ಮಾರ್ಗದಲ್ಲಿ ರಸ್ತೆಯಲ್ಲಿನ ಬೃಹತ್ ಗುಂಡಿಗಳಿಗೆ ಮಣ್ಣು ಹಾಕಿಸಿ ಮುಚ್ಚುವ ಕೆಲಸದಲ್ಲಿ ಪಾಲ್ಗೊಂಡು ಮಾತನಾಡಿದರು.

ನಗರದ ದಿಬ್ಬೂರಹಳ್ಳಿ ರಸ್ತೆಯಲ್ಲಿರುವ ನ್ಯಾಯಾಲಯಕ್ಕೆ ಹೋಗುವ ಮಾರ್ಗ ಮದ್ಯೆ ರಸ್ತೆಯಲ್ಲಿ ಬಹಳಷ್ಟು ಗುಂಡಿಗಳು ಬಿದ್ದಿದ್ದು ಸಂಚಾರಕ್ಕೆ ಅಡ್ಡಿಯಾಗುತ್ತಿತ್ತು. ಕಳೆದ ಆರು ತಿಂಗಳುಗಳಿಂದ ಬಿದ್ದಿದ್ದ ಗುಂಡಿಗಳನ್ನು ಮುಚ್ಚುವಂತೆ ಸಾಕಷ್ಟು ಭಾರಿ ನಗರಸಭೆ ಆಯುಕ್ತರಿಗೆ ಮನವಿ ಮಾಡಲಾಗಿತ್ತು ಎಂದರು.

ಆದರೆ ನಗರಸಭೆ ಅಧಿಕಾರಿಗಳು ಈ ಬಗ್ಗೆ ಕ್ರಮ ಜರುಗಿಸದೇ ಇದ್ದುದರಿಂದ ಬೇಸತ್ತು ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳು ಇಂದು ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳಿಗೆ ಮಣ್ಣು ತುಂಬಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದರು. ಈ ಸಂದರ್ಭದಲ್ಲಿ ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿ ಎಂ.ಬಿ.ಲೋಕೇಶ್, ವಕೀಲರಾದ ಬೈರರೆಡ್ಡಿ, ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT