ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇವೇಗೌಡರ ಕೊಡುಗೆ ಅಪಾರ’

Last Updated 13 ನವೆಂಬರ್ 2017, 10:14 IST
ಅಕ್ಷರ ಗಾತ್ರ

ಬಸವನಬಾಗೇವಾಡಿ: ‘ಜಿಲ್ಲೆಯ ನೀರಾವರಿ ಯೋಜನೆಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ₹ 4,800 ಕೋಟಿ ಬಿಡುಗಡೆ ಮಾಡಿರುವುದನ್ನು ಹೊರತುಪಡಿಸಿದರೆ ಹೇಳಿಕೊಳ್ಳುವಷ್ಟು ಸಾಧನೆ ಮಾಡಿಲ್ಲ. ಜಿಲ್ಲೆಯ ನೀರಾವರಿ ಯೋಜನೆಗೆ ದೇವಗೌಡರ ಕೊಡುಗೆ ಮರೆಯುವಂತಿಲ್ಲ’ ಎಂದು ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ತಾಲ್ಲೂಕಿನ ಕಣಕಾಲ ಗ್ರಾಮದಲ್ಲಿ ಶುಕ್ರವಾರ ಉತ್ತರ ಕರ್ನಾಟಕ ಕನ್ನಡಿಗರ ಸ್ವಾಭಿಮಾನಿ ಯಾತ್ರೆಗೆ ಸ್ವಾಗತ ಕೋರಿದ ನಂತರ ದಸ್ತಗೀರಸಾಬ ದರ್ಗಾದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಜನತಾ ಪರಿವಾರದ ಸರ್ಕಾರದಲ್ಲಿ ಮುಖ್ಯಮಂತ್ರಿಗಳಾಗಿದ್ದ ಎಚ್.ಡಿ.ದೇವೇಗೌಡ, ರಾಮಕೃಷ್ಣ ಹೆಗಡೆ, ಜೆ.ಎಚ್. ಪಟೇಲ ಅವರು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವುಗಳನ್ನೇ ಸಿದ್ದರಾಮಯ್ಯನವರ ಸರ್ಕಾರ ನಕಲು ಮಾಡುವ ಮೂಲಕ ಎಲ್ಲವನ್ನು ನಾನೆ ಮಾಡಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾರೆ’ ಎಂದು ದೂರಿದರು.

ಬೃಹತ್ ಸಮಾವೇಶ: ‘ಉತ್ತರ ಕರ್ನಾಟಕ ಕನ್ನಡಿಗರ ಸ್ವಾಭಿಮಾನಿ ಯಾತ್ರೆಯು ನ.14 ರಂದು ಬೆಳಗಾವಿಗೆ ತಲುಪಲಿದೆ. ಅಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ನಾನು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ. ಸಮಾವೇಶದಲ್ಲಿ ದೇವರಹಿಪ್ಪರಗಿ ಕ್ಷೇತ್ರದಿಂದ 20 ಸಾವಿರ ಜನರು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

ಗುರುನಗೌಡ ಪಾಟೀಲ, ಶಿವರುದ್ರಯ್ಯ ಹಿರೇಮಠ, ಸಂಗಯ್ಯ ಬೊಮ್ಮನಳ್ಳಿ, ಆರ್.ಎಂ.ನದಾಫ್, ಶಖೀಲ ಗುಡ್ನಾಳ, ಸಾಹೇಬಗೌಡ ಉತ್ನಾಳ, ಸಾಹೇಬಗೌಡ ನದಾಫ್, ಶಂಕರಗೌಡ ಮ್ಯಾಗೇರಿ, ಮಹಮ್ಮದರಫಿ ಇಲಕಲ್, ರಾಮಣ್ಣ ಯರಝರಿ, ಓಗೇಪ್ಪ ಹಿರೇಕುರಬರ, ಶಿವಾನಂದ ಹುಲ್ಲೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT