ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ.14 ರಂದು ಸುರಪುರ ಬಂದ್ ಕರೆ

Last Updated 13 ನವೆಂಬರ್ 2017, 10:23 IST
ಅಕ್ಷರ ಗಾತ್ರ

ಸುರಪುರ: ‘ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ (ನ. 14) ಸುರಪುರ ಬಂದ್‌ ಗೆ ಕರೆ ನೀಡಲಾಗಿದೆ’ ಎಂದು ಎಚ್.ಡಿ.ಕುಮಾರಸ್ವಾಮಿ ಸೇನೆಯ ರಾಜ್ಯ ಘಟಕದ ಕಾರ್ಯಾಧ್ಯಕ್ಷ ವೆಂಕೋಬ ದೊರೆ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಕುಂಠಿತ್ತಾ ಸಾಗಿವೆ. ಕೆಲವು ಕಾಮಗಾರಿಗಳಲ್ಲಿ ಕೋಟ್ಯಂತರ ಮೊತ್ತದ ಅವ್ಯವಹಾರ ನಡೆದಿದೆ. ಈ ಕುರಿತು ಕ್ರಮ ಜರುಗಿಸುವಂತೆ ಸಂಘಟನೆಯಿಂದ ಹಲವು ಬಾರಿ ಪ್ರತಿಭಟನೆ ನಡೆಸಿ ಅಧಿಕಾರಿಗಳು, ಪ್ರಾದೇಶಿಕ ಆಯುಕ್ತ, ಜಿಲ್ಲಾಧಿಕಾರಿ, ತಹಶೀಲ್ದಾರ್‌ ಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದರು.

‘ಜಿಲ್ಲಾ ನಿರ್ಮಿತಿ ಕೇಂದ್ರದ ಅಧಿಕಾರಿಗಳು ನಗರದ ಯಲ್ಲಪ್ಪನ ಬಾವಿ ಹತ್ತಿರ ಸಾರ್ವಜನಿಕ ಉದ್ಯಾನ ಕಾಮಗಾರಿ ಅಪೂರ್ಣಗೊಳಿಸಿ ಕೋಟ್ಯಂತರ ರೂಪಾಯಿ ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ದೂರಿದರು.

‘ತಾಲ್ಲೂಕಿನಲ್ಲಿ 4 ವರ್ಷಗಳ ಹಿಂದೆಯೇ ಮಂಜೂರಾದ ವಾಲ್ಮೀಕಿ ಭವನಗಳ ಕಾಮಗಾರಿ ನಿಂತು ಹೋಗಿವೆ. ಹಳೆ ತಹಶೀಲ್ದಾರ್‌ ಕಚೇರಿ ಹಿಂಭಾಗದಲ್ಲಿ ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿ 6 ವರ್ಷವಾದರೂ ಪೂರ್ಣಗೊಂಡಿಲ್ಲ’ ಎಂದು ಆರೋಪಿಸಿದರು.

‘ಭೂ ಸೇನಾ ನಿಗಮದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು. ಗೋಪಾಲ ಬಾಗಲಕೋಟೆ, ವೆಂಕಟೇಶ, ಉಸ್ತಾದ ವಜಾಹತ ಹುಸೇನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT