ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜ್ಯಕ್ಕೆ ಪ್ರಾದೇಶಿಕ ಪಕ್ಷ ಅನಿವಾರ್ಯ’

Last Updated 13 ನವೆಂಬರ್ 2017, 20:21 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಂಗ್ರೆಸ್‌ ಮತ್ತು ಬಿಜೆಪಿ ಮುಖಂಡರು ಪರಸ್ಪರ ಆಪಾದನೆ ಮತ್ತು ಪದಪ್ರಯೋಗಗಳಲ್ಲಿ ತೊಡಗಿದ್ದಾರೆ. ಈ ಮೂಲಕ ರಾಜ್ಯದ ಅಭಿವೃದ್ಧಿಯ ಕಡೆಗೆ ಗಮನಹರಿಸದೆ ದಿವಾಳಿ ಅಂಚಿಗೆ ಕೊಂಡೊಯ್ಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದ ಅನಿವಾರ್ಯತೆಯ ಬಗ್ಗೆ ಜನತೆ ಚಿಂತಿಸಬೇಕಾದ ಅಗತ್ಯವಿದೆ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದರು.

ಯಲಹಂಕ ಉಪನಗರದಲ್ಲಿ ಜೆಡಿಎಸ್‌ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ತಮಿಳುನಾಡು ಹಾಗೂ ಆಂಧ್ರಪ್ರದೇಶಗಳಲ್ಲಿ ಪ್ರಾದೇಶಿಕ ಪಕ್ಷಗಳು ಹಲವು ವರ್ಷಗಳಿಂದ ಆಡಳಿತ ನಡೆಸುತ್ತಿವೆ. ಅಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಇಂದಿಗೂ ತಲೆ ಎತ್ತಲು ಸಾಧ್ಯವಾಗಿಲ್ಲ. ಆದರೆ, ನಮ್ಮ ಕನ್ನಡಿಗರಿಗೆ ಸ್ವಾಭಿಮಾನವಿಲ್ಲವೇ ಎಂದು ಪ್ರಶ್ನಿಸಿದರು.

ಗುಜರಾತ್‌ನಲ್ಲಿ 16 ವರ್ಷಗಳಿಂದ ಬಿಜೆಪಿ ಆಡಳಿತ ನಡೆಸುತ್ತಿದೆ. ಚುನಾವಣಾ ಸಂದರ್ಭದಲ್ಲಿ ಆ ಪಕ್ಷ 70 ಬಹಿರಂಗ ಸಭೆಗಳನ್ನು ನಡೆಸಿದೆ. ಇದನ್ನು ಗಮನಿಸಿದರೆ ಅಲ್ಲಿ ಪಕ್ಷ ಅಧಿಕಾರಕ್ಕೆ ಬರುವ ಬಗ್ಗೆ ಅವರಿಗೇ ಸಂಶಯ ಕಾಡಿದೆ. ಹಣದ ಹೊಳೆಯನ್ನೇ ಹರಿಸುತ್ತಿದ್ದರೂ ಇದನ್ನು ಕೇಳುವವರೇ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT