ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಾನೆ ದಾಂದಲೆ ತಡೆಗೆ ಆಗ್ರಹ

Last Updated 14 ನವೆಂಬರ್ 2017, 6:36 IST
ಅಕ್ಷರ ಗಾತ್ರ

ಆಲೂರು: ಕಾಡಾನೆ– ಮಾನವಸಂಘರ್ಷಕ್ಕೆ ಸರ್ಕಾರ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಈ ಭಾಗದ ರೈತರು ಒತ್ತಾಯಿಸಿದ್ದಾರೆ. ಈ ಕುರಿತು ಗಮನಸೆಳೆಯಲು ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ನಟರಾಜ್ ತಿಳಿಸಿದರು.

ತಾಲ್ಲೂಕಿನ ಪಾಳ್ಯ ಹಾಗೂ ಕೆ. ಹೊಸಕೋಟೆ ಹೋಬಳಿಯ ವಿವಿಧೆಡೆ ಕಾಫಿ, ಭತ್ತ, ಜೋಳ, ಮೆಣಸು, ಬಾಳೆ ಬೆಳೆಗಳನ್ನು ಕಾಡಾನೆಗಳು ಹಾಳು ಮಾಡಿದ್ದು, ಇಂಥ ಪ್ರಕರಣಗಳನ್ನು ತಪ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರ ಕಾಡಾನೆ ಸಮಸ್ಯೆಗೆ ಪರಿಹಾರ ಕಲ್ಪಿಸುವುದಾಗಿ ಹೇಳುತ್ತಲೇ ಇದೇ. ಆದರೆ, ಪರಿಹಾರ ಸಿಕ್ಕಿಲ್ಲ. ಸಾಲಮಾಡಿ ಬೆಳೆದ ಬೆಳಗಳನ್ನು ಕಾಡಾನೆ ಹಿಂಡು ನಾಶ ಮಾಡುತ್ತಿರುವುದರ, ಆನೆ ದಾಳಿಯಿಂದ ರೈತರು ಮೃತಪಟ್ಟಿರುವ ನಿದರ್ಶನವಿದೆ ಎಂದರು.

ಕ.ರ.ವೇ ಘಟಕದ ತಾಲ್ಲೂಕು ಉಪಾಧ್ಯಕ್ಷ ರಘು , ತಾಲ್ಲೂಕಿನ ಕೆ. ಹೊಸಕೋಟೆ ಹಾಗೂ ಕುಂದೂರು ಹೋಬಳಿ ವ್ಯಾಪ್ತಿಯಲ್ಲಿ ಸಮಸ್ಯೆ ಇದೆ. ಸರ್ಕಾರ ಕೂಡಲೇ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು. ಸರ್ಕಾರ ಕ್ರಮ ಕೈಗೊಳ್ಳದೇ ಇದ್ದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು. ರೈತ ಧರ್ಮಪ್ಪ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT