ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ರಂಗಗಳಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ

Last Updated 14 ನವೆಂಬರ್ 2017, 9:24 IST
ಅಕ್ಷರ ಗಾತ್ರ

ಬೈಂದೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಕೇಂದ್ರ ನೀಡಿದ ಕೋಟ್ಯಂತರ ರೂಪಾಯಿ ಅನುದಾನವನ್ನು ಸೂಕ್ತವಾಗಿ ಬಳಸಿಕೊಂಡು ರಾಜ್ಯದ ಅಭಿವೃದ್ಧಿ ಸಾಧಿಸುವ ಬದಲು, ಅದರ ಲೂಟಿ ಮತ್ತು ದರೋಡೆ ನಡೆಸಿದೆ. ಜನಹಿತ ಮರೆತ ಈ ಸರ್ಕಾರ ತೊಲಗಲೇ ಬೇಕು ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ. ಎಸ್.ಯಡಿಯೂರಪ್ಪ ಹೇಳಿದರು.

ಬಿಜೆಪಿ ಪರಿವರ್ತನಾ ಯಾತ್ರೆಯ ಭಾಗವಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ನಾಗೂರಿನಲ್ಲಿ ಸೋಮವಾರ ನಡೆದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ‘ಕೇಂದ್ರ ಸರ್ಕಾರದ ಹೆದ್ದಾರಿ ಯೋಜನೆ, ಜನರಿಕ್ ಔಷಧಿ ಯೋಜನೆ, ರಸಗೊಬ್ಬರ ಕೊರತೆ ನಿವಾರಣೆ, ವಿದ್ಯುದೀಕರಣ, ಮುದ್ರಾ ಯೋಜನೆಗಳಂತಹ ಕಾರ್ಯಕ್ರಮಗಳ ಮೂಲಕ ಜನಹಿತ ಬಯಸಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಬುರುಡೆ ದಾಸಯ್ಯನಂತೆ, ಕನಸು ಕಾಣುವ ತಿರುಕನಂತೆ ವರ್ತಿಸುತ್ತ ರಾಜ್ಯವನ್ನು ದಿವಾಳಿಯ ಅಂಚಿಗೆ ತಲುಪಿಸಿದ್ದಾರೆ’ ಎಂದು ಜರಿದರು. ಬೈಂದೂರು ಕ್ಷೇತ್ರದ ಎಲ್ಲ ಸಮಸ್ಯೆಗಳನ್ನು ಮಂದಿನ ತಮ್ಮ ಆಡಳಿತಾವಧಿಯಲ್ಲಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದರಾದ ಶೋಭಾ ಕರಂದ್ಲಾಜೆ, ಶ್ರೀರಾಮುಲು, ಮಾಜಿ ಸಂಸದೆ ತೇಜಸ್ವಿನಿ ರಮೇಶ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ, ಪಕ್ಷದ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಕೇಂದ್ರದ ಮೋದಿ ಸರ್ಕಾರದ ಸಾಧನೆ, ಜನಪರ ಕಾರ್ಯಗಳನ್ನು ಜನರ ಮುಂದಿಟ್ಟರು.

ಬೈಂದೂರು ಕ್ಷೇತ್ರ ಸಮಿತಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಕಾರ್ಯದರ್ಶಿ ದೀಪಕ್‌ಕುಮಾರ ಶೆಟ್ಟಿ ನಿರೂಪಿಸಿದರು. ಪ್ರಮುಖರಾದ ರಘುಪತಿ ಭಟ್, ಭಾರತಿ ಶೆಟ್ಟಿ, ದಿವಾಕರ ಬಾಬು, ಕೆ. ಲಕ್ಷ್ಮೀನಾರಾಯಣ, ನರಸಿಂಹಮೂರ್ತಿ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT