ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಮಿ ನೀಡಿದರೆ ಕ್ರೀಡಾಂಗಣ ನಿರ್ಮಾಣ: ಶಾಸಕ

Last Updated 15 ನವೆಂಬರ್ 2017, 6:48 IST
ಅಕ್ಷರ ಗಾತ್ರ

ಅಜ್ಜಂಪುರ: ತಾಲ್ಲೂಕು ಕೇಂದ್ರವಾಗಿ ಘೋಷಣೆಯಾಗಿರುವ ಅಜ್ಜಂಪುರದಲ್ಲಿ ಸ್ಥಳೀಯ ಆಡಳಿತ ಅಥವಾ ದಾನಿಗಳು 10 ಎಕರೆ ಭೂಮಿ ನೀಡಿದರೆ ಕ್ರೀಡಾಂಗಣ ಮತ್ತು ಈಜುಕೊಳ ನಿರ್ಮಿಸಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಭರವಸೆ ನೀಡಿದರು.

ಪಟ್ಟಣದ ಶೆಟ್ರು ಸಿದ್ದಪ್ಪ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಹೊನಲು-ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಬೀರೂರಿನ ತಂಡ ಪ್ರಥಮ ಸ್ಥಾನ ಗಳಿಸಿ, ಟ್ರೋಫಿ ಮತ್ತು ₹30 ಸಾವಿರ, ಮಂಗಳೂರಿನ ತಂಡ ದ್ವಿತೀಯ ಸ್ಥಾನ ಗಳಿಸಿ ₹20 ಸಾವಿರ, ಮುಗುಳಿ ತಂಡ ತೃತೀಯ ಬಹುಮಾನ ₹10 ಸಾವಿರವನ್ನು ತನ್ನದಾಗಿಸಿಕೊಂಡವು.

ಕದಂಬ ಯುವಕ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಪಂದ್ಯಾವಳಿ ಆಯೋಜಿಸಿತ್ತು. ಸಂಘದ ಅಧ್ಯಕ್ಷ ನವೀನ್ ಮಂದಾಲಿ ಮತ್ತು ಸದಸ್ಯರು, ಸ್ಥಳೀಯ ಮುಖಂಡ ಜಿ.ನಟರಾಜ್, ಸರ್ಕಾರಿ ನೌಕರ ಜಿಲ್ಲಾ ಸಂಘದ ಉಪಾಧ್ಯಕ್ಷ ರಾಮಚಂದ್ರಪ್ಪ, ಉಪನ್ಯಾಸಕ ಜಯಪ್ರಕಾಶ್, ದೈಹಿಕ ನಿರ್ದೇಶಕ ತಿಮ್ಮರಾಜು, ಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT