ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕರ್ಷಕ ಉಡುಗೆ ತೊಟ್ಟು ಸಂಭ್ರಮಿಸಿದ ಚಿಣ್ಣರು

Last Updated 15 ನವೆಂಬರ್ 2017, 9:58 IST
ಅಕ್ಷರ ಗಾತ್ರ

ಹುಣಸೂರು : ನಗರದ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ವೇಷಭೂಷಣ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.ರೋಟರಿ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಥ ಮಿಕ ವಿಭಾಗದ ಮಕ್ಕಳು ಆಕರ್ಷಕ ಉಡುಗೆ ತೊಟ್ಟು ಗಮನಸೆಳೆದರು. ಮಕ್ಕಳಿಗಾಗಿ ಪ್ಯಾಷನ್‌ ಷೋ ಆಯೋಜಿಸಲಾಗಿತ್ತು.ಪೋಷಕರಿಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. 

ಶಾಸ್ತ್ರಿ ಪಬ್ಲಿಕ್ ಸ್ಕೂಲ್‌: ಶಾಲೆಯಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪುಟ್ಟ ಮಕ್ಕಳಿಗಾಗಿ ನಡೆದ ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಟ್ಯಾಲೆಂಟ್‌ ವಿದ್ಯಾ ಸಂಸ್ಥೆ, ಎಂ.ಆರ್‌,ಎನ್‌.ವಿ ಶಾಲೆಗಳಲ್ಲೂ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆದವು.

ನಂಜನಗೂಡು: ತಾಲ್ಲೂಕಿನ ಎಸ್.ಹೊಸಕೋಟೆ ಗ್ರಾಮದ ಗುರುಮಲ್ಲೇಶ್ವರ ವಿದ್ಯಾಸಂಸ್ಥೆಯಿಂದ ಗುರುಮಲ್ಲೇಶ್ವರ ಭಿಕ್ಷಾ ಮಠದ ಆವರಣದಲ್ಲಿ ಮಂಗಳವಾರ ಮಠದ ಅಧ್ಯಕ್ಷ ಗುರುಸ್ವಾಮಿ ಅವರ 39ನೇ ಹುಟ್ಟುಹಬ್ಬದ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.

ಮೈಸೂರಿನ ಕೆ.ಆರ್.ಆಸ್ಪತ್ರೆಯ ರಕ್ತನಿಧಿ ವಿಭಾಗದ ವೈದ್ಯ ಡಾ.ಮಂಜುನಾಥ್‍ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ತುರ್ತು ಸಂದರ್ಭಗಳಲ್ಲಿ ಅಪಘಾತ ಹಾಗೂ ಶಸ್ತ್ರ ಚಿಕಿತ್ಸೆ ನಡೆಸುವಾಗ ಜನರ ಪ್ರಾಣ ಉಳಿಸಲು ರಕ್ತದ ಅವಶ್ಯವಿದ್ದು, ರಕ್ತದಾನದಿಂದ ಅನೇಕ ಜೀವ ಉಳಿಸಬಹುದು ಎಂದರು.

ಸಂಸ್ಥೆಯ ಅಧ್ಯಕ್ಷ ಗುರುಸ್ವಾಮಿ, ಶಿಕ್ಷಕರಾದ ಎಚ್.ಎಂ. ಶೋಭಾ, ಗಿರೀಶ್, ಪ್ರಭುಸ್ವಾಮಿ, ಗ್ರಾ.ಪಂ ಸದಸ್ಯರಾದ ರವಿ, ಪರಶಿವಮೂರ್ತಿ, ಮಠದ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT