ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ: ಬಿ.ವಿಠ್ಠಲ ರಾಜು

Last Updated 16 ನವೆಂಬರ್ 2017, 7:01 IST
ಅಕ್ಷರ ಗಾತ್ರ

ಬಳ್ಳಾರಿ:‘ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಪಂಗಡದವರಿಗೆ ಜವಳಿ ಉದ್ಯಮ ಪ್ರಾರಂಭ ಮಾಡಲು ಸರ್ಕಾರ ಶೇ.75 ರಷ್ಟು ಸಹಾಯ ಧನ ಸಹಾಯ ನೀಡುತ್ತದೆ’ ಎಂದು ಕೈ ಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ಬಿ.ವಿಠ್ಠಲ ರಾಜು ಹೇಳಿದರು.

ನಗರದ ಪೊಲೀಸ್ ಜಿಮ್‌ಖಾನ್‌ದಲ್ಲಿ ಕೈ ಮಗ್ಗ ಜವಳಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಬುಧವಾರ ಜಂಟಿಯಾಗಿ ನೂತನ ಜವಳಿ ನೀತಿ 2013–18 ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆ, ಸಾಮಾನ್ಯ ಯೋಜನೆಗಳಡಿಯಲ್ಲಿ ಐದು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ ಉಳಿದ ಶೇ.15 ರಷ್ಟು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲವನ್ನು ತಗೆದುಕೊಳ್ಳಬೇಕಾಗುತ್ತದೆ. ಇನ್ನು ಉಳಿದ ಶೇ.10 ರಷ್ಟು ಅಭ್ಯರ್ಥಿಗಳು ಸ್ವಂತ ಹಣವನ್ನು ಭರಿಸಬೇಕಾಗುತ್ತದೆ. ಹೀಗಾಗಿ ಸಮುದಾಯದವರು ಉದ್ಯಮ ಪ್ರಾರಂಭಿಸಲು ಮುಂದೆ ಭರಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ‘ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಪಂಗಡದವರಿಗೆ ಸಾಕಷ್ಟು ಸೌಲಭ್ಯಗಳಿವೆ ಅವುಗಳನ್ನು ತಿಳಿದುಕೊಂಡು ಬಳಸಿಕೊಳ್ಳಬೇಕು. ಉದ್ಯಮ ಪ್ರಾರಂಭಿಸುವವರಿಗೆ ತರಬೇತಿ ಶಿಬಿರ ಪ್ರಯೋಗವಾಗಲಿದೆ. ಇದರಿಂದ ಉದ್ಯಮದಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT