ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 7.5 ಮೀಸಲಾತಿ ಕಲ್ಪಿಸಲು ಒತ್ತಾಯ

Last Updated 16 ನವೆಂಬರ್ 2017, 8:27 IST
ಅಕ್ಷರ ಗಾತ್ರ

ಬಾಗೇಪಲ್ಲಿ: ‘ಬೆಳಗಾವಿಯಲ್ಲಿ ನಡೆದಿರುವ ಚಳಿಗಾಲ ಅಧಿವೇಶನದಲ್ಲಿ ಪರಿಶಿಷ್ಟ ಪಂಗಡಕ್ಕೆ ಶೇ 7.5 ಮೀಸಲಾತಿ ಕಲ್ಪಿಸಲು ಮುಂದಾಗಬೇಕು’ ಎಂದು ಸಮುದಾಯ ಮುಖಂಡ ಗೂಳೂರು ಲಕ್ಷ್ಮಿನಾರಾಯಣ ಒತ್ತಾಯಿಸಿದ್ದಾರೆ.

'ರಾಜ್ಯದಲ್ಲಿ ಪರಿಶಿಷ್ಟ ಪಂಗಡದವರು ಸುಮಾರು 70 ಲಕ್ಷ ಜನರಿದ್ದಾರೆ. ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕವಾಗಿ ಹಿಂದುಳಿದು ಶೋಷಣೆಗೆ ಒಳಗಾಗಿದ್ದಾರೆ. ಇದರಿಂದ ಕಲಾಪದಲ್ಲಿ ಸಮುದಾಯದ ಪರವಾಗಿ ಧ್ವನಿ ಎತ್ತಿಬೇಕು’ಎಂದು ಆಗ್ರಹಿಸಿದ್ದಾರೆ.

'ರಾಜ್ಯ ಸರ್ಕಾರ ಸಮುದಾಯದವರಿಗೆ ಕೇವಲ ಶೇ 3 ಮೀಸಲಾತಿ ನೀಡುವುದರ ಮುಖಾಂತರ ಸುಪ್ರೀಂ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿದೆ' ಎಂದು ಆರೋಪಿಸಿದ್ದಾರೆ.

'ತಮ್ಮ ಸಮುದಾಯದವರಿಗೆ ಮೀಸಲಾತಿ ಹೆಚ್ಚಳ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಡುಕುರುಬ, ಗೊಲ್ಲ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಹೊರಟಿರುವುದು ಬೇಸರದ ಸಂಗತಿ' ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT