ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ನಡ ಬೆಳವಣಿಗೆಗೆ ಅರಸರ ಕೊಡುಗೆ ಅಪಾರ’

Last Updated 16 ನವೆಂಬರ್ 2017, 10:16 IST
ಅಕ್ಷರ ಗಾತ್ರ

ಶಿಗ್ಗಾವಿ: ಕನ್ನಡ ನಾಡು ವೈಭವ ಯುತವಾಗಿ ಬಾಳಿ ಬೆಳಗಿದ ನಾಡಾಗಿದ್ದು, ಕನ್ನಡ ಭಾಷಾ ಬೆಳವಣಿಗೆಗೆ ಇಲ್ಲಿನ ಆಳಸರ ಕೊಡುಗೆ ಅಪಾರವಾಗಿದೆ ಎಂದು ರಂಭಾಪುರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ವಿ. ಕುಲಕರ್ಣಿ ಹೇಳಿದರು.

ತಾಲ್ಲೂಕಿನ ಹೊತ್ನಹಳ್ಳಿ ಗ್ರಾಮದ ಬಾಲಕರ ವಸತಿ ನಿಲಯದಲ್ಲಿ ಮಂಗಳವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ದ್ಯಾಮನಕೊಪ್ಪ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ನೂರು ವರ್ಷಗಳಿಂದ ಕನ್ನಡಿಗರಲ್ಲಿ ಕನ್ನಡತನವನ್ನು ಮೂಡಿಸುವ ಕೆಲಸದಲ್ಲಿ ನಿರತವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿಂದುಳಿದ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತರಣಾ ಅಧಿಕಾರಿ ಎಸ್.ಬಿ ಪುರಾಣಿಕ, ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾಭಿಮಾನ ಮೂಡಲು ಇದು ಸಹಕಾರಿಯಾಗಿದೆ ಎಂದರು.

ಕಸಾಪ ಶಿಗ್ಗಾವಿ ಹೋಬಳಿ ಘಟಕದ ಅಧ್ಯಕ್ಷ ಎಸ್.ಎನ್.ಮುಗಳಿ ಪ್ರಾಸ್ತಾವಿಕವಾಗಿ ಮಾತನಾಡಿದರು ಬಂಕಾಪುರ ಹೋಬಳಿ ಅಧ್ಯಕ್ಷ ಡಾ. ಆರ್.ಎಸ್. ಅರಳೆಲೆಮಠ, ನಿವೃತ್ತಿ ಮುಖ್ಯ ಶಿಕ್ಷಕ ಎ.ಕೆ. ಅದ್ವಾನಿಮಠ, ರಮೇಶ ಹರಿಜನ ಮಾತನಾಡಿದರು.

ಸಿಂದಗಿಮಠದ ಶಂಭುಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮುತ್ತುರಾಜ ಮಾದರ, ಸಿ ಎನ್. ಶಿಗ್ಗಾಂವ, ಶಿಕ್ಷಕ ಡಾನಗಲ್, ಆವಜಿ, ಹನುಮಂತ ವಡ್ಡರ, ಗೂಳಣ್ಣವರ ಮತ್ತಿತರರು ಇದ್ದರು.

ಬಸವರಾಜ ನಾರಾಯಣಪುರ ಸ್ವಾಗತಿಸಿದರು. ಮಂಜುನಾಥ ಕೂಲಿ ನಿರೂಪಿಸಿದರು. ನಾಗಪ್ಪ ಬೆಂತೂರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT