ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕಿ ವೇತನ ಬಿಡುಗಡೆಗೆ ಒತ್ತಾಯ

Last Updated 16 ನವೆಂಬರ್ 2017, 10:28 IST
ಅಕ್ಷರ ಗಾತ್ರ

ಕಲಬುರ್ಗಿ: ಆರು ತಿಂಗಳ ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಗುತ್ತಿಗೆ ನೌಕರರು ಶ್ರಮಜೀವಿಗಳ ವೇದಿಕೆ ಆಶ್ರಯದಲ್ಲಿ ಬುಧವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

15 ದಿನಗಳ ಹಿಂದೆ ಸಾಂಕೇತಿಕ ಹೋರಾಟ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಕ್ರಮಕೈಗೊಂಡಿಲ್ಲ. ಇದರಿಂದಾಗಿ 350ಕ್ಕೂ ಹೆಚ್ಚು ನೌಕರರು ತೊಂದರೆ ಅನುಭವಿಸುವಂತಾಗಿದೆ. ಇನ್ನೊಂ ದೆಡೆ ಗುತ್ತಿಗೆ ನೌಕರರಿಗೆ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ವಾರಾಂತ್ಯ ಹಾಗೂ ಸಾಂದರ್ಭಿಕ ರಜೆಗಳೂ ಸಿಗುತ್ತಿಲ್ಲ. ಆದ್ದರಿಂದ ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದರು.

ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಅಧ್ಯಕ್ಷ ಬಸವರಾಜ ನಂದೂರ, ಉಪಾಧ್ಯಕ್ಷ ರಾಜಕುಮಾರ, ಹಣಮಂತ ಪೂಜಾರಿ, ವಿಜಯಕುಮಾರ ತೆಗನೂರ, ವೆಂಕಟೇಶ ಪದಕಿ, ಸಿದ್ದೇಶ್ವರ ತೆಗನೂರ, ಸಂತೋಷ ಜಾನೆ, ನಾರಾಯಣ ರಂಗದಾಳ, ಖಾಸಿಂ ಶೇಖ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT